ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ

ಆಲೂರು ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಶಾಸಕ ಸಿಮೆಂಟ್ ಮಂಜು ಮಾಲಾರ್ಪಣೆ ಮಾಡಿದರು. ತಹಸೀಲ್ದಾರ್ ಮಲ್ಲಿಕಾರ್ಜುನ್, ಮಾವನೂರ್ ಮೋಹನ್, ನವೀನ ದಡದಲ್ಲಿ, ಬಾಲ ಲೋಚನ, ಜೆಸಿಬಿ ಲೋಕೇಶ್ ಇತರರಿದ್ದರು.
ಆಲೂರು ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಶಾಸಕ ಸಿಮೆಂಟ್ ಮಂಜು ಮಾಲಾರ್ಪಣೆ ಮಾಡಿದರು. ತಹಸೀಲ್ದಾರ್ ಮಲ್ಲಿಕಾರ್ಜುನ್, ಮಾವನೂರ್ ಮೋಹನ್, ನವೀನ ದಡದಲ್ಲಿ, ಬಾಲ ಲೋಚನ, ಜೆಸಿಬಿ ಲೋಕೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿಮೆಂಟ್ ಮಂಜು ಸಲಹೆ
  • ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಆಲೂರು: ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಶಾಸಕ ಸಿಮೆಂಟ್ ಮಂಜು ಅವರು ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಸಮರ್ಪಣಾ ದಿನ ಆಚರಣೆಗೆ ಚಾಲನೆ ನೀಡಿದರು.
1949ರ ನ.26ರಂದು ಸಂವಿಧಾನವನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ ಈ ದಿನವನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ದೇಶದಲ್ಲಿನ ಎಲ್ಲ ವರ್ಗದವರಿಗೂ ಸಂವಿಧಾನದಲ್ಲಿ ಸಮಾನವಾದ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಂದೇ ಭಾವನೆ ಹೊಂದಬೇಕು. ಈ ದಿನ ಪ್ರತಿಯೊಬ್ಬರು ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಭಾರತದ ಸಂವಿಧಾನ ದಿನ ಆಚರಣೆ ಮಾಡಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣಾಧಿಕಾರಿ ಕೌಸರ್ ಅಹಮದ್, ಗ್ರಾಮ ಪಂಚಾಯಿತಿ ಸದಸ್ಯ ಮಾವನೂರು ಮೋಹನ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಡಿ.ಜೆ ನವೀನ್ ಡದಹಳ್ಳಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಬಾಲಲೋಚನ, ಭೂತ್ ಅಧ್ಯಕ್ಷ ಕರಿಯಯ್ಯ, ಬಿಜೆಪಿ ಹಿರಿಯ ಮುಖಂಡ ಕೆ.ಎಚ್.ರಮೇಶ್ ಹಳೆ ಆಲೂರು, ಜೆಸಿಬಿ ಲೋಕೇಶ್, ಆಕಾಶವಾಣಿ ಮಂಜಣ್ಣ, ಹುಣಸೆ ಸಿದ್ದಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net