ನಾನು ಸಚಿವನಾಗಿದ್ದ ವೇಳೆ ಮಂಜೂರಾಗಿದ್ದ ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಆಂಧ್ರಪ್ರದೇಶ ಮೂಲದ ಬಿ.ಎಸ್.ಆರ್. ಕನ್‌ಸ್ಟ್ರಕ್ಷನ್ ಕಂಪನಿ ಇಂದಿಗೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಇದಕ್ಕೆ ಇಂಜಿನಿಯರ್‌ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯೇ ಕಾರಣ. ಮೀನುಗಾರಿಕೆ ಇಲಾಖೆಗೆ ಸೇರಿದ ಕಟ್ಟಡಗಳನ್ನು ನೆಲಸಮಗೊಳಿಸಿದರೂ ಪರ್ಯಾಯ ವ್ಯವಸ್ಥೆ ಕೈಗೊಂಡು ಕಾಮಗಾರಿ ಕೈಗೆತ್ತಿಕೊಂಡಿಲ್ಲ ಎಂದು ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಹರಿಹಾಯ್ದರು.