ಸಂವಿಧಾನ ಕುರಿತ ತಾಲೂಕು ಮಟ್ಟದ ಪ್ರಬಂಧ ಸ್ಫರ್ಧೆ

ಅರಕಲಗೂಡಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ  ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ತಾಲೂಕು ಮಟ್ಟದ  ಪ್ರಬಂಧ ಸ್ಫರ್ಧೆಯಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು.
ಅರಕಲಗೂಡಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಫರ್ಧೆಯಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಮಟ್ಟದ ಪ್ರಬಂಧ ಸ್ಫರ್ಧೆ
ಅರಕಲಗೂಡು: ವಿಶ್ವ ಚೇತನ ಜೈಭೀಮ್ ಚಾರಿಟಬಲ್ ಟ್ರಸ್ಟ್  ಗಣರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳ ಕುರಿತು ಅರಿವು ಮೂಡಿಸಲು ಭಾರತದ ಸಂವಿಧಾನ ಹಾಗೂ ಪ್ರಸ್ತುತ ಸಮಾಜ ವಿಷಯ ಕುರಿತು ತಾಲೂಕು ಮಟ್ಟದ  ಪ್ರಬಂಧ ಸ್ಫರ್ಧೆ ಏರ್ಪಡಿಸಲಾಗಿತ್ತು. 
ಪಟ್ಟಣದ ಶಿಕ್ಷಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸ್ಫರ್ಧೆಗೆ ತಹಸೀಲ್ದಾರ್ ಕೆ.ಸಿ.ಸೌಮ್ಯಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳ 248 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  ತಾಲೂಕು ಕಚೇರಿ ಆಡಳಿತಾಧಿಕಾರಿ ಸೋಮಶೇಖರ್, ತಾಲೂಕು ಎಸ್‌ಸಿ, ಎಸ್‌ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ , ವಿಶ್ವ ಚೇತನ ಜೈಭೀಮ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ.ಸಿ.ಕಿರಣ್, ಕಾರ್ಯದರ್ಶಿ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಜೆ.ಪ್ರದೀಪ್, ಖಜಾಂಚಿ ಎಂ.ಕೆ. ಗಣೇಶ್, ನಿರ್ದೇಶಕ ಡಿ.ಎಸ್.ಅಶೋಕ್, ಉಪನ್ಯಾಸಕ ರವಿಕುಮಾರ್ ಮತ್ತು ಕೆಲ್ಲೂರು ರವಿಕುಮಾರ್ ಉಪಸ್ಥಿತರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net