ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಹಾಗೂ ವಾರ್‌ರೂಂ ಕಾರ್ಯ ನಿರ್ವಹಿಸಲಿದ್ದು, ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಿ ಕುಡಿಯುವ ನೀರು, ಆಹಾರ ಹಾಗೂ ವೈದ್ಯಕೀಯ ನೆರವು ಒದಗಿಸಲಾಗುವುದು. ಜೂ.23ರಂದು ಆನೆಮಹಲ್ ಅಚೀವರ್ಸ್ ಶಾಲೆ ಮುಂಭಾಗದಲ್ಲಿ ಎನ್‌ಡಿಆರ್‌ಎಫ್ ಸಹಯೋಗದಲ್ಲಿ ಭೂಕುಸಿತ ಜಾಗೃತಿ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆ ಕುರಿತ ಅಣಕು ಪ್ರದರ್ಶನ (ಮಾಕ್‌ಡ್ರಿಲ್) ಆಯೋಜಿಸಲಾಗಿದೆ ಎಂದು ತಿಳಿಸಿದರು.ಇದಕ್ಕೂ ಮೊದಲು ಮುಂಗಾರು ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಯಿತು. ತಾಲೂಕು ಪಂಚಾಯಿತಿ ಇಒ ಗಂಗಾಧರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಶ್, ಸರ್ಕಲ್ ಇನ್‌ಸ್ಪೆಕ್ಟರ್ ವನರಾಜ್, ಪುರಸಭೆ ಮುಖ್ಯಾಧಿಕಾರಿ ಮಹದೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಇತರರಿದ್ದರು.