ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕ ರಹಮತ್ ಉಲ್ಲಾ, ಈ ಶಾಲೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದೇ ಜೀವನದ ಅಮೂಲ್ಯ ಕ್ಷಣವಾಗಿದೆ ಎಂದರು. ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳ ಸಂಘ, ಪೋಷಕರು, ಗ್ರಾಮಸ್ಥರು, ಸಹ ಶಿಕ್ಷಕರು ಶಾಲೆಯನ್ನು ತಮ್ಮ ಮನೆಯಂತೆ ಕಂಡು ಪ್ರತಿಯೊಂದು ಕಾರ್ಯದಲ್ಲೂ ಬೆನ್ನೆಲುಬಾಗಿ ನಿಂತಿದ್ದಾರೆ. ಅವರ ಸಹಕಾರದಿಂದಲೇ ಶಾಲೆ ಇಂದು ಶೈಕ್ಷಣಿಕ ಮತ್ತು ಭೌತಿಕವಾಗಿ ಉತ್ತಮ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.