ಹಾಸನ ನಗರಸಭೆ, ಮಹಾನಗರಪಾಲಿಕೆಯಾಗಿರುವ ಹಿನ್ನೆಲೆಯಲ್ಲಿ ನಗರದ ಪ್ರತಿಯೊಂದು ವಾರ್ಡ್‌ಗೂ ಸಮಾನವಾಗಿ ಅಭಿವೃದ್ಧಿ ಕಾಮಗಾರಿ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.