ನಾಡ ಪ್ರಭು ಕೆಂಪೇಗೌಡ ಜಯಂತ್ಯುತ್ಸವ ಆಚರಣೆ ಸಮಿತಿ ಸದಸ್ಯ ಮಳಲಿ ನಾರಾಯಣ್ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ಹೇಮಾವತಿ ವೃತ್ತದ ಬಳಿ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಗಣಪತಿ ಪೆಂಡಾಲಿನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಕೆಂಗೇರಿಯ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಮಹಾ ಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಉಪಸ್ಥಿತರಿರುವರು. ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ವಿವರಿಸಿದರು.