ಹಾಡು ಕೇಳಿ ಭಾವುಕರಾಗಿ ಕಣ್ಣೀರಿಟ್ಟ ಶ್ರೋತೃಗಳು

ಹೆಸರಾಂತ ಹಿನ್ನೆಲೆ ಗಾಯಕಿ ದಿವಂಗತ ಎಸ್. ಜಾನಕಿ ಅವರ ಸ್ಮರಣಾರ್ಥ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಸನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೋಟರಿ, ಲಯನ್ಸ್ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾದದೇವಿಯ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಚ್.ಎಲ್. ಮಲ್ಲೇಶಗೌಡ, ಡಾ.ಹಂಪನಹಳ್ಳಿ ತಿಮ್ಮೇಗೌಡ, ಎನ್.ಎಲ್. ಚನ್ನೇಗೌಡ, ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಜೆ.ಪಿ. ಶೇಖರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಹಾಡು ಕೇಳಿ ಭಾವುಕರಾಗಿ ಕಣ್ಣೀರಿಟ್ಟ ಶ್ರೋತೃಗಳು
  • ಗಾಯಕಿ ದಿ.ಎಸ್.ಜಾನಕಿ ಅವರಿಗೆ ನಾದದೇವಿಯ ಸ್ಮರಣಾಂಜಲಿ ಕಾರ್ಯಕ್ರಮ

ಹಾಸನ:

ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ದಿವಂಗತ ಎಸ್.ಜಾನಕಿ ಅವರ ಸ್ಮರಣಾರ್ಥ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಸನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೋಟರಿ, ಲಯನ್ಸ್ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಾದದೇವಿಯ ಸ್ಮರಣಾಂಜಲಿ ಕಾರ್ಯಕ್ರಮವು ಅಪೂರ್ವ ಜನಸ್ಪಂದನೆಗೆ ಪಾತ್ರವಾಯಿತು.

ಶುಕ್ರವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಭಾಂಗಣ ಜನರಿಂದ ಕಿಕ್ಕಿರಿದು ತುಂಬಿದ್ದು, ಎಸ್.ಜಾನಕಿ ಅವರ ಅಪಾರ ಜನಪ್ರಿಯತೆಗೆ ಸಾಕ್ಷಿಯಾಯಿತು.

ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಚ್.ಎಲ್.ಮಲ್ಲೇಶಗೌಡರು ಎಸ್. ಜಾನಕಿ ಅವರ ಸಂಗೀತ ಸಾಧನೆ ಮತ್ತು ಕನ್ನಡ ಚಿತ್ರರಂಗಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಗಣ್ಯರು ಎಸ್.ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎರಡು ನಿಮಿಷಗಳ ಮೌನ ಆಚರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂಗೀತಾಸಕ್ತರು, ಸಾಹಿತ್ಯಾಭಿಮಾನಿಗಳು, ಕಲಾವಿದರು ಹಾಗೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ನಾದದೇವಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಜಿಲ್ಲೆಯ ಹೆಸರಾಂತ ಗಾಯಕ-ಗಾಯಕಿಯರು ಎಸ್.ಜಾನಕಿ ಅವರು ಹಾಡಿದ ಕನ್ನಡದ ಸುಮಧುರ ಗೀತೆಗಳನ್ನು ಪ್ರಸ್ತುತಪಡಿಸಿದರು. ಪ್ರತಿಯೊಂದು ಗೀತೆಯೂ ಸಭಿಕರನ್ನು ಭಾವಲೋಕಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.
ಹಲವು ಸಂದರ್ಭಗಳಲ್ಲಿ ಶ್ರೋತೃಗಳು ಭಾವುಕರಾಗಿ ಕಣ್ಣೀರಿಡುವ ಮೂಲಕ ನಾದದೇವಿಯೊಂದಿಗಿನ ತಮ್ಮ ಭಾವನಾತ್ಮಕ ನಂಟನ್ನು ವ್ಯಕ್ತಪಡಿಸಿದರು.
ಸಾಹಿತಿ ಡಾ.ಹಂಪನಹಳ್ಳಿ ತಿಮ್ಮೇಗೌಡ, ಎನ್.ಎಲ್.ಚನ್ನೇಗೌಡ, ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಕೆ.ಎಂ.ಶ್ರೀನಿವಾಸ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಜೆ.ಪಿ.ಶೇಖರ್, ಸತೀಶ್ ಪಿಳ್ಳೇನಹಳ್ಳಿ, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಬಾಳ್ಳುಗೋಪಾಲ್, ಆರ್.ಬಿ. ಶಂಕರ್, ಚಂದ್ರಶೇಖರ್, ಮಮತೇಶ್, ಚನ್ನರಾಯಪಟ್ಟಣದ ಹಡೇನಹಳ್ಳಿ ಲೋಕೇಶ್, ಆಲೂರಿನ ಗೋಪಾಲಕೃಷ್ಣ, ಮಂಜುನಾಥ್, ವಜ್ರಕುಮಾರ್, ಲಯನ್ ವೆಂಕಟೇಶ್, ಮೋಹನ್ ಕುಮಾರ್, ಕುವೆಂಪು ಯುವಕರ ಬಳಗದ ಅಧ್ಯಕ್ಷ ಗಿರೀಶ್, ಸುಮಂತ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net