ಸಂವಿಧಾನ ಒಂದು ವರ್ಗಕ್ಕೆ ಸೀಮಿತವಾಗಿಲ್ಲ

ಅರಕಲಗೂಡಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು. ಸೌಮ್ಯಾ, ನಾರಾಯಣ, ರವಿಕುಮಾರ್ ಇತರರಿದ್ದರು.
ಅರಕಲಗೂಡಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು. ಸೌಮ್ಯಾ, ನಾರಾಯಣ, ರವಿಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು ಅಭಿಪ್ರಾಯ
ಅರಕಲಗೂಡು: ದೇಶದಲ್ಲಿ ಕಟ್ಟ ಕಡೆಯ ವ್ಯಕ್ತಿಯು ಸಮಾನತೆ, ಸ್ವಾತಂತ್ರೃದಿಂದ ಬದುಕುವ ಅಧಿಕಾರವನ್ನು ಸಂವಿಧಾನ ನೀಡಿದೆ ಎಂದು ಶಾಸಕ ಎ. ಮಂಜು ಹೇಳಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನವಾಗಿದ್ದು ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಸಂವಿಧಾನದ ಆಶಯಗಳಂತೆ ದೇಶದ ಕಾನೂನುಗಳಿಗೆ ಎಲ್ಲರೂ ಗೌರವ ಕೊಡಬೇಕು. ಪ್ರತಿಯೊಬ್ಬರಿಗೂ ಸಮಾನತೆ ಸಮಪಾಲು ಸಿಗುವಂತಾಗಬೇಕು ಎಂದರು.
ಸಂವಿಧಾನ ಅಂಗೀಕರಿಸಿದ ದಿನವಾದ ನ.26ರನ್ನು ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಸಂವಿಧಾನ ದಿನಾಚರಣೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಉಪನ್ಯಾಸಕ ಬಸವರಾಜು ಪ್ರಧಾನ ಭಾಷಣ ಮಾಡಿದರು. ತಹಸೀಲ್ದಾರ್ ಕೆ.ಸಿ. ಸೌಮ್ಯಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್, ತಾಲೂಕ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net