ಸಂಸ್ಥೆಯ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳ ಸಹಕಾರ ಅಗತ್ಯ

ಹಾಸನ ನಗರದ ಬಿ.ಎಂ.ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ  ಸ್ವಾಗತ ಕಮಾನು ಉದ್ಘಾಟಿಸಲಾಯಿತು. ಕೆ.ಎಂ.ಶ್ರೀನಿವಾಸ್, ಪ್ರದೀಪ್ ಕುಮಾರ್, ಜೆ.ಟಿ.ಶಿವಣ್ಣ, ಪರಮೇಶ್ ಇತರರಿದ್ದರು.
ಹಾಸನ ನಗರದ ಬಿ.ಎಂ.ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸ್ವಾಗತ ಕಮಾನು ಉದ್ಘಾಟಿಸಲಾಯಿತು. ಕೆ.ಎಂ.ಶ್ರೀನಿವಾಸ್, ಪ್ರದೀಪ್ ಕುಮಾರ್, ಜೆ.ಟಿ.ಶಿವಣ್ಣ, ಪರಮೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂಸ್ಥೆಯ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳ ಸಹಕಾರ ಅಗತ್ಯ
  • ಐಟಿಐ ಕಾಲೇಜು ಎನ್‌ಎಸ್‌ಎಸ್ ಅಧಿಕಾರಿ ಕೆ.ಎಂ.ಶ್ರೀನಿವಾಸ್ ಅಭಿಪ್ರಾಯ
  • ಸ್ವಾಗತ ಕಮಾನು ಉದ್ಘಾಟಿಸಿದರು.

ಹಾಸನ:

ನಗರದ ಬಿ.ಎಂ. ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) 60 ವರ್ಷಗಳ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಹಳೆ ವಿದ್ಯಾರ್ಥಿಗಳ ಸಹಕಾರ ಹಾಗೂ ದಾನಿಗಳ ನೆರವಿನಿಂದ ಕಾಲೇಜಿನ ಮುಖ್ಯ ಪ್ರವೇಶ ದ್ವಾರದಲ್ಲಿ ನಿರ್ಮಿಸಲಾದ ಭವ್ಯ ಸ್ವಾಗತ ಕಮಾನು (ಆರ್ಚ್) ಅನ್ನು ಗುರುವಾರ ಉದ್ಘಾಟಿಸಲಾಯಿತು.

ಐಟಿಐ ಕಾಲೇಜು ಎನ್‌ಎಸ್‌ಎಸ್ ಅಧಿಕಾರಿ ಕೆ.ಎಂ.ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಸ್ಥೆ ಕೇವಲ ಶಿಕ್ಷಣ ನೀಡಿಲ್ಲ. ಬದುಕನ್ನು ಕಟ್ಟಿಕೊಟ್ಟಿದೆ. ಇಂದು ದೇಶದ ವಿವಿಧೆಡೆ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಹಳೆ ವಿದ್ಯಾರ್ಥಿಗಳು ಈ ಸಂಸ್ಥೆಯ ಹೆಮ್ಮೆಯ ಪ್ರತಿನಿಧಿಗಳಾಗಿದ್ದಾರೆ. ಸಂಸ್ಥೆಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕಮಾನು ನಿರ್ಮಿಸಲಾಗಿದೆ ಎಂದರು.

ಹಳೆ ವಿದ್ಯಾರ್ಥಿಗಳ ಅಭಿಮಾನ ಮತ್ತು ಬದ್ಧತೆಯನ್ನು ಶ್ಲಾಘಿಸಿದರು. ಸಂಸ್ಥೆಯ ಅಭಿವೃದ್ಧಿಗೆ ಅವರ ನಿರಂತರ ಸಹಕಾರ ಅತ್ಯಂತ ಅಮೂಲ್ಯವಾಗಿದೆ. ಕಾಲೇಜಿನಲ್ಲಿ ಇನ್ನೂ ಮೂಲಸೌಕರ್ಯ ಅಭಿವೃದ್ಧಿಗೆ ಹಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಎಲ್ಲ ಹಳೆ ವಿದ್ಯಾರ್ಥಿಗಳು ಹಾಗೂ ಸಮಾಜದ ದಾನಿಗಳು ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಂಸ್ಥೆಯ ಉಪನಿರ್ದೇಶಕ ಪ್ರದೀಪ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜೆ.ಟಿ.ಶಿವಣ್ಣ, ಖಜಾಂಚಿ ಪರಮೇಶ್, ನಿರ್ದೇಶಕ ಡಿ.ಸುರೇಶ್, ಜ್ಯೋತಿ, ಇಂದ್ರಮ್ಮ, ಸುನೀಲ್, ಕಚೇರಿ ಅಧೀಕ್ಷಕ ಚಂದ್ರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net