ಗಂಡಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮಿತ್ರಾ, ಚಂದ್ರಶೇಖರ್, ಕೋಟಿ ಪ್ರದೀಪ್, ನಾಗರಾಜು, ಕುಮಾರ್ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಗಂಡಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ
ಗಂಡಸಿ: ಒಂದು ಗ್ರಾಮವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳ ಸಹಕಾರ ಅಗತ್ಯ ಎಂದು ಗಂಡಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.
ಅರಸೀಕೆರೆ ತಾಲೂಕು ಗಂಡಸಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಗಮಿತ ಗಂಡಸಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
5 ವರ್ಷ ಅವಧಿಯ ಗ್ರಾಮ ಪಂಚಾಯಿತಿಯಲ್ಲಿ ನಾನು ಕೊನೆಯ 10 ತಿಂಗಳು ಗಂಡಸಿ ಗ್ರಾ.ಪಂ.ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಸದಸ್ಯರು ಅಡ್ಡಿಪಡಿಸದೆ ಸಹಕಾರ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಿದ್ದು, ಪ್ರತಿ ತಿಂಗಳು ಗ್ರಾಮ ಸಭೆ ನಡೆಸಿ ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿಗಳ ಸಲಹೆ ಸೂಚನೆಗಳನ್ನು ಪಡೆದುಕೊಂಡು ಸಾಧ್ಯವಾದಷ್ಟು ಉತ್ತಮವಾದ ಕೆಲಸಗಳನ್ನು ಮಾಡಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮಿತ್ರಾ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಮಾಜಿ ಸದಸ್ಯರಾದ ಕೋಟಿ ಪ್ರದೀಪ್, ನಾಗರಾಜು, ಕುಮಾರ್, ದಿನೇಶ್, ಕವಿತಾ, ವೀಣಾ, ಅನಸೂಯಾ, ಜಯಲಕ್ಷ್ಮಮ್ಮ, ಚಿಕ್ಕಮ್ಮ, ಸೀಮಸುಲ್ತಾನ್ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.