ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಮೇಳ ಸಹಕಾರಿ

ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಆಹಾರ ಮೇಳ ಹಾಗೂ ಕ್ಯಾಂಟೀನ್ ಡೇ ಕಾರ್ಯಕ್ರಮಕ್ಕೆ ಶಾಸಕ ಎ.ಮಂಜು ಚಾಲನೆ ನೀಡಿದರು. ಅಂಜುಂ ಫರ್ಜಾನ್, ಮಂಜುನಾಥ್ ಇತರರು ಇದ್ದರು.
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಆಹಾರ ಮೇಳ ಹಾಗೂ ಕ್ಯಾಂಟೀನ್ ಡೇ ಕಾರ್ಯಕ್ರಮಕ್ಕೆ ಶಾಸಕ ಎ.ಮಂಜು ಚಾಲನೆ ನೀಡಿದರು. ಅಂಜುಂ ಫರ್ಜಾನ್, ಮಂಜುನಾಥ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು ಅಭಿಪ್ರಾಯ
  • ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಹಾರ ಮೇಳ
ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಹಾರ ಮೇಳ ಹಾಗೂ ಕ್ಯಾಂಟೀನ್ ಡೇ ಆಯೋಜಿಸಲಾಗಿತ್ತು.
ಸಾಂಪ್ರದಾಯಿಕ ಉಡುಗೆ ಧರಿಸಿದ್ದ ವಿದ್ಯಾರ್ಥಿಗಳು ಬಗೆ ಬಗೆಯ ರುಚಿಕರವಾದ ಸಿಹಿ ತಿನಿಸುಗಳು, ಮಾಂಸಾಹಾರಿ ಭಕ್ಷ್ಯಗಳನ್ನು ಸಿದ್ಧಪಡಿಸಿದ್ದು ಜನರ ಬಾಯಲ್ಲಿ ನೀರೂರಿಸಿದವು. ಶಾಸಕ ಎ.ಮಂಜು ಮೇಳ ವೀಕ್ಷಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕೌಶಲ, ಜ್ಞಾನ ವೃದ್ಧಿಸುವಲ್ಲಿ ಇಂಥ ಮೇಳಗಳು ಸಹಕಾರಿಯಾಗಲಿವೆ ಎಂದು ಹೇಳಿದರು.
ಪ್ರಾಂಶುಪಾಲೆ ಅಂಜುಂ ಫರ್ಜಾನ್, ಉಪನ್ಯಾಸಕರಾದ ಬಾಬು ವರ್ಧನ್, ಶಶಿಧರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net