ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು, ನಿತ್ಯ ಒಂದಿಲ್ಲೊಂದು ತೋಟ, ಜಮೀನಿಗೆ ನುಗ್ಗುತ್ತಲೇ ಇವೆ. ಇದರಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ತಾಲೂಕಿನ ಹಲವಾರು ಗ್ರಾಮಗಳಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳು ಕಾಫಿ ತೋಟ, ಭತ್ತದ ಗದ್ದೆ, ಅಡಕೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳನ್ನು ತಿನ್ನುವುದಲ್ಲದೆ ತೋಟಗಳಲ್ಲಿ ಅಳವಡಿಸಿದ್ದ ಮೋಟಾರ್ ಪಂಪ್‌ಗಳು, ಪೈಪ್‌ಗಳನ್ನು ತುಳಿದು ಹಾಳು ಮಾಡುತ್ತಿವೆ. ಕೆಲವೊಂದು ಆನೆಗಳು ಆಹಾರ ಅರಸಿ ಮನೆಗಳ ಅಂಗಳಕ್ಕೂ ನುಗ್ಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.