

ನಂಜನಗೂಡು:
ನೆರೆಯ ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜೀವ ನದಿ ಕಪಿಲೆ ಮೈದುಂಬಿ ಹರಿಯುತ್ತಿದೆ.
ಕಬಿನಿ ಜಲಾಶಯದಿಂದ 27 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವುದರಿಂದ ದೇವಾಲಯದ ಸ್ನಾನಘಟ್ಟ, ಮುಡಿಕಟ್ಟೆ, ಪರಶುರಾಮರ ದೇವಾಲಯ, ಅಯ್ಯಪ್ಪ ಸ್ವಾಮಿ ದೇವಾಲಯ ಇನ್ನು ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ತಾಲೂಕು ಆಡಳಿತ, ನಗರ ಸಭೆಯ ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಹಳ್ಳದಕೇರಿ, ಸರಸ್ವತಿ ಕಾಲನಿ, ಮೇದರ ಬೀದಿ, ಸಂಗಮ, ಹುಲ್ಲಹಳ್ಳಿ ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ಡಂಗೂರ ಸಾರಲು ಹಾಗೂ ನದಿಯಲ್ಲಿ ನೀರು ಕಡಿಮೆಯಾಗುವವರೆಗೂ ಅಧಿಕಾರಿಗಳಿಗೆ ತಗ್ಗು ಪ್ರದೇಶಗಳಿಗೆ ಭೇಟಿ ನೀಡಲು ಸೂಚನೆ ನೀಡಿದ್ದೇನೆ ಎಂದು ಶಾಸಕ ದರ್ಶನ್ ಧುವನಾರಾಯಣ ವಿಜಯವಾಣಿಗೆ ತಿಳಿಸಿದರು.