ತಾಲೂಕಿನ ಹಾನುಬಾಳು ಮುಖ್ಯ ರಸ್ತೆಯಿಂದ (ವೆಂಕಟಹಳ್ಳಿ) ಜಂಬರಡಿ ರಾಗಿಗುಂಡಿಗೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆಯನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ನಾನು ಶಾಸಕನಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎತ್ತಿನಹೊಳೆ ಯೋಜನೆಯಡಿ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ಅದರ ಫಲವಾಗಿ ಈಗ 72 ಕೋಟಿ ರೂ. ಬಿಡುಗಡೆಯಾಗಿದೆ. ಎತ್ತಿನಹೊಳೆ ಯೋಜನೆಯಿಂದ ತಾಲೂಕಿನ ಪರಿಸರಕ್ಕೆ ಅಪಾರ ಹಾನಿಯಾಗಿದ್ದರೂ, ನಮ್ಮ ಕ್ಷೇತ್ರದ ಜನತೆ ಬಯಲುಸೀಮೆ ಜಿಲ್ಲೆಗಳ ಜನರಿಗಾಗಿ ಕುಡಿಯುವ ನೀರನ್ನು ಬಿಟ್ಟುಕೊಟ್ಟಿದ್ದಾರೆ. ಈ ಯೋಜನೆಯಿಂದ ಏಳು ಜಿಲ್ಲೆಗಳ ಸುಮಾರು 70 ಲಕ್ಷ ಜನರಿಗೆ ಲಾಭವಾಗಲಿದೆ ಎಂದು ಹೇಳಿದರು.