ಗಾಯಕಿ ಎಸ್.ಜಾನಕಿಯವರ ನಿಧನದ ಹಿನ್ನೆಲೆಯಲ್ಲಿ ಚುಟುಕು ಸಾಹಿತ್ಯ ಪರಿಷತ್‌ನಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮೀನಾಕ್ಷಿ, ಬಾನಂ ಲೋಕೇಶ್,ಕಿರಣ್ ಕುಮಾರ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಮತ
ಬೇಲೂರು: ಪಟ್ಟಣದ ಹೊಸನಗರದ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ಚುಟುಕು ಸಾಹಿತ್ಯ ಪರಿಷತ್‌ನಿಂದ ಇತ್ತೀಚೆಗೆ ಆಯೋಜಿಸಿದ್ದ ಸಂಗೀತ ಲೋಕದ ಹೆಸರಾಂತ ಗಾಯಕಿ ಎಸ್.ಜಾನಕಿಯವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಗಣ್ಯರು ಬಾವಚಿತ್ರಕ್ಕೆ ಪುಷ್ಪನಮನದ ಮೂಲಕ ಗೌರವ ಸಲ್ಲಿಸಿದರು.
ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಮಾತನಾಡಿ, ದಕ್ಷಿಣ ಭಾರತದ ಗಾನ ಕೋಗಿಲೆ ಎಸ್.ಜಾನಕಿ ಅಮ್ಮನವರ ಸಾಧನೆ ಹೇಳ ತೀರದ್ದಾಗಿದೆ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ. ಶಿವರಾಜ್ ಮಾತನಾಡಿ, ತಮ್ಮ ಸುಮದುರ ಕಂಟದ ಮೂಲಕ ಕೋಟ್ಯಾಂತರ ಜನರ ಹೃದಯ ಗೆದ್ದವರು ಎಸ್.ಜಾನಕಿಯವರು. ಅವರು ಸಂಗೀತ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಅವರ ಹಾಡುಗಳು ವಿಶ್ವದಲ್ಲಿ ಮನೆ ಮಾತಾಗಿವೆ ಎಂದರು.