ಪರಿಷ್ಕೃತ ವೇತನ ಕಡ್ಡಾಯವಾಗಿ ಜಾರಿಗೆ ಬರಲಿ

ರಾಜ್ಯದ ವಿವಿಧ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 4.5 ಲಕ್ಷ ರೂ. ಹೊರ ಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಈಗಾಗಲೇ ಹೊರಡಿಸಿರುವ ಕರಡು ಅಧಿಸೂಚನೆ ಯನ್ನು ತಕ್ಷಣ ಅಂತಿಮ ಗೊಳಿಸಿ, ಪರಿಷ್ಕೃತ ವೇತನವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘದವರು ಹಾಸನದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕೃಷ್ಣದಾಸ್, ಪ್ರಕಾಶ್, ಎಚ್.ಕೆ. ಸಂದೇಶ್, ಕೃಷ್ಣಕುಮಾರ್, ರಂಗಸ್ವಾಮಿ ಗುಡ್ಡೇನಹಳ್ಳಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘ ಆಗ್ರಹ
  • ಹಾಸನ ಡಿಸಿ ಕಚೇರಿ ಬಳಿ ಪ್ರತಿಭಟನೆ

ಹಾಸನ: ರಾಜ್ಯದ ವಿವಿಧ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಕನಿಷ್ಠ ವೇತನ ಸುಮಾರು 4.5 ಲಕ್ಷ ರೂ. ಪರಿಷ್ಕರಣೆ ಕುರಿತು ಈಗಾಗಲೇ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಿ, ಪರಿಷ್ಕೃತ ವೇತನ ಜಾರಿಗೆ ತರಬೇಕು ಎಂದು ಆಗ್ರಹಿಸಿ ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘದವರು ಹಾಸನ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹಿರಿಯ ಮುಖಂಡ ಕೃಷ್ಣದಾಸ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಜೀವನ ವೆಚ್ಚ ಹೆಚ್ಚಾಗಿದೆ. ಈ ಕಾಲಘಟ್ಟದಲ್ಲಿ ಹೊರಗುತ್ತಿಗೆ ನೌಕರರಿಗೆ ಪ್ರಸ್ತುತ ನೀಡುತ್ತಿರುವ ವೇತನ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ. ಹೀಗಾಗಿ ಕನಿಷ್ಠ ವೇತನ ಪರಿಷ್ಕರಣೆ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಆಗ್ರಹಿಸಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗನಾಥ್ ಮಾತನಾಡಿ, ಅನೇಕ ಕಡೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಎಲ್ಲ ಅರ್ಹ ನೌಕರರಿಗೂ ಪರಿಷ್ಕೃತ ಕನಿಷ್ಠ ವೇತನ ಅನ್ವಯವಾಗುವಂತೆ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.
ಕನಿಷ್ಠ ವೇತನ ಜತೆಗೆ ಕಾನೂನು ಬದ್ಧವಾಗಿ ಅನ್ವಯಿಸುವ ಇತರ ಸೌಲಭ್ಯ ಹಾಗೂ ಭತ್ಯೆಗಳನ್ನು ನೌಕರರಿಗೆ ಸಮರ್ಪಕವಾಗಿ ನೀಡುವಂತೆ ಖಾತ್ರಿಪಡಿಸಬೇಕು. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ, ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಕನಿಷ್ಠ ವೇತನ ಸಮರ್ಪಕವಾಗಿ ಜಾರಿಯಾಗುತ್ತಿದೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಹಿರಿಯದಲಿತ ಮುಖಂಡ ಎಚ್.ಕೆ. ಸಂದೇಶ್, ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ್, ರಂಗಸ್ವಾಮಿ ಗುಡ್ಡೇನಹಳ್ಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net