ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ

ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮಾತನಾಡಿದರು. ಡಿಸಿ ಲತಾಕುಮಾರಿ ಇದ್ದರು.
ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮಾತನಾಡಿದರು. ಡಿಸಿ ಲತಾಕುಮಾರಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ
  • ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ
  • ಪ್ರಗತಿ ಪರಿಶೀಲನಾ ಸಭೆ
ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ 2026ರ ಮಾರ್ಚ್ ಅಂತ್ಯಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ರಾಸುಗಳಿಗೆ ಮೇವು, ಕೃಷಿ ಚಟುವಟಿಕೆಗಳಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿರುವಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜನಗಣತಿ 2027ರ ಹಿನ್ನೆಲೆಯಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ, ಮನೆ ಪಟ್ಟಿ ತಯಾರಿಸುವ ಮತ್ತು ಮನೆ ಗಣತಿ ಕಾರ್ಯವು ನಡೆಯುತ್ತಿದ್ದು, ಸದರಿ ಗಣತಿ ಕಾರ್ಯವನ್ನು ಚುರುಕುಗೊಳಿಸುವಂತೆ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ್ಲ ಯೋಜನೆಗಳು ಈ ಗಣತಿಯ ಆಧಾರದ ಮೇಲೆ ನಿರ್ಧಾರವಾಗುತ್ತದೆ. ಈ ನಿಟ್ಟಿನಲ್ಲಿ ಸದರಿ ಗಣತಿ ಕಾರ್ಯಕ್ಕೆ ಪ್ರಾಮುಖ್ಯ ನೀಡಿ, ಕರ್ತವ್ಯಕ್ಕೆ ನಿರ್ವಹಿಸಿ ಎಂದು ತಿಳಿಸಿದರು.
ಸದರಿ ಗಣತಿ ಕಾರ್ಯವನ್ನು ಹಬ್ಬದ ರೀತಿ ಸಂಭ್ರಮಿಸಿ ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ಯಶಸ್ವಿಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಮಧ್ಯಾಹ್ನ ಮತ್ತು ಸಂಜೆ ಪರಿಶೀಲನೆ ಮಾಡಿ ಎಂದರಲ್ಲದೆ, ಗಣತಿದಾರರು 6 ರಿಂದ 10 ಮನೆಗಳ ಗಣತಿ ಕಾರ್ಯ ಪೂರ್ಣಗೊಳಿಸಿದ ನಂತರ ಮೇಲ್ವಿಚಾರಕರು ಪರಿಶೀಲಿಸಿ ತಕ್ಷಣ ವರದಿಯನ್ನು ಅಪ್ಲೋಡ್ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net