ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕೆ.ಆರ್.ಪೇಟೆ, ಕಿಕ್ಕೇರಿ, ಹಿರೀಸಾವೆ, ಬಾಗೂರು, ಪಟ್ಟಣದ ಹೊಸ ಬಸ್ ನಿಲ್ದಾಣದಿಂದ ಶಿಕ್ಷಣ ಸಂಸ್ಥೆಯ ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಉಚಿತವಾಗಿ ಕರೆತರಲಾಗುವುದು. ಜ.11ರಂದು ಬೆಳಗ್ಗೆ 10 ಮತ್ತು 11.30 ಗಂಟೆಗೆ ಎರಡು ಅವಧಿಯಲ್ಲಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ 10 ವಿದ್ಯಾರ್ಥಿಗಳಿಗೆ ನಮ್ಮ ಕಾಲೇಜಿನಲ್ಲಿನ ದಾಖಲಾತಿಗೆ ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ಶೇ.50 ರಷ್ಟು ವಿದ್ಯಾರ್ಥಿವೇತನ ಪಡೆಯಲಿದ್ದಾರೆ. ಇದರಲ್ಲಿ ಕೆಸಿಇಟಿ, ನೀಟ್, ಜೆಇಇ ತರಬೇತಿ ನೀಡಲಾಗುವುದು. ವಿದ್ಯಾರ್ಥಿಗಳು ಜ.8ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಪರೀಕ್ಷೆ ನೋಂದಣಿ ಉಚಿತವಾಗಿರುತ್ತದೆ ಎಂದು ವಿವರಿಸಿದರು.