ಹಾಸನ ಸಂಸದ ಶ್ರೇಯಸ್ ಪಟೇಲ್ ಪಂದ್ಯಾವಳಿ ಉದ್ಘಾಟಿಸುವರು. ಶಾಸಕ ಸಿ.ಎನ್.ಬಾಲಕಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಗೋಪಾಲಸ್ವಾಮಿ, ಎಂಎಲ್‌ಸಿ ಸೂರಜ್ ರೇವಣ್ಣ, ರಾಜ್ಯ ವಿದ್ಯುತ್ ಕಾರ್ಖಾನೆ ನಿಗಮದ ಅಧ್ಯಕ್ಷ ಎಚ್.ಸಿ.ಲಲಿತಾ ರಾಘವ್, ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಮತ್ತು ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಹರ್ಷ್, ಕಾರ್ಯದರ್ಶಿ ಆಂಟೋನಿ ಜೋಸೆಪ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಹಿರಿಯ ವಾಲಿಬಾಲ್ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.