ನಾಳೆ, ನಾಳಿದ್ದು ಕ್ರಿಕೆಟ್ ಲೀಗ್ ಪಂದ್ಯ

Cricket legue
Cricket legue
Published on
ಸಕಲೇಶಪುರ: ಎರಡನೇ ವರ್ಷದ ಕ್ರಾಫರ್ಡ್ ಅಫಿಷಿಯಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಪಟ್ಟಣದಲ್ಲಿ ಈ ಬಾರಿಯೂ ಆಯೋಜಿಸಲಾಗಿದ್ದು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಕ್ರಾಫರ್ಡ್ ಆಸ್ಪತ್ರೆ ಕ್ಷಕಿರಣ ವಿಭಾಗದ ವ್ಯವಸ್ಥಾಪಕ ರಘು ಹೇಳಿದ್ದಾರೆ.
ಆರೋಗ್ಯವೇ ಭಾಗ್ಯ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಗತ್ಯ ಈ ನಿಟ್ಟಿನಲ್ಲಿ ಕ್ರಾಫರ್ಡ್ ಆಸ್ಪತ್ರೆ ವತಿಯಿಂದ ಪಟ್ಟಣದ ಸುಭಾಷ್ ಮೈದಾನದಲ್ಲಿ ಡಿ.13 ಮತ್ತು 14ರಂದು ಎರಡು ದಿನಗಳವರೆಗೆ ಲೀಗ್ ಮಾದರಿಯಲ್ಲಿ ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಪ್ರತಿ ತಂಡಕ್ಕೂ 5000 ರೂ. ಪ್ರವೇಶ ಶುಲ್ಕ ನಿಗದಿ ಮಾಡಲಾಗಿದ್ದು, ಪ್ರಥಮ ಬಹುಮಾನ 30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 20 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ 10 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ನಾಲ್ಕನೇ ಬಹುಮಾನ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಒಟ್ಟು 20 ವಿವಿಧ ಇಲಾಖೆಗಳ ತಂಡಗಳು ಭಾಗವಹಿಸಲಿದ್ದು ಮೊದಲ ದಿನ 10 ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಎರಡು ಅಂಕಣಗಳಲ್ಲಿ ಆಡಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡನೇ ದಿನ ಇನ್ನುಳಿದ 10 ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಎರಡು ಅಂಕಣಗಳಲ್ಲಿ ಆಡಳಿವೆ. ಒಟ್ಟಾರೆ ಮೊದಲ ದಿನ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಹಾಗೂ ಎರಡನೇ ದಿನ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಪರಸ್ಪರವಾಗಿ ಸೆಣೆಸಲಿವೆ. ಆಟವಾಡುವವರು ಕಡ್ಡಾಯವಾಗಿ ಗುರುತಿನ ಚೀಟಿ ತರಬೇಕು. ಶನಿವಾರ ಬೆಳಗ್ಗೆ 9 ಗಂಟೆಗೆ ಕ್ರಾಫರ್ಡ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅರುಣ್‌ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಭಾನುವಾರ ಸಂಜೆ 5.30ಕ್ಕೆ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಕ್ರಾಫರ್ಡ್ ಆಸ್ಪತ್ರೆಯ ಎಲ್ಲ ವೈದ್ಯರು ಉಪಸ್ಥಿತರಿರುವರು.
ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net