ಪ್ರಕೃತಿ ಸಂರಕ್ಷಣೆಗೆ ಮುಂದಾಗಿ

ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬೇಲೂರು ಪಟ್ಟಣದ ಯುರೋ ಕಿಡ್ಸ್ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಡಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು,  ಕಾರ್ಯದರ್ಶಿ ರಾಘವೇಂದ್ರ, ಸದಸ್ಯರಾದ ವಿನೋದ್ ಚೌಡ, ರಂಗನಾಥ್, ಮೊಗಪ್ಪಗೌಡ, ಸಂದೇಶ್, ಯೋಗೇಶ್ ಗೌಡ, ರೇವಣ್ಣಗೌಡ ಇತರರು ಇದ್ದರು.
ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬೇಲೂರು ಪಟ್ಟಣದ ಯುರೋ ಕಿಡ್ಸ್ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಡಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು, ಕಾರ್ಯದರ್ಶಿ ರಾಘವೇಂದ್ರ, ಸದಸ್ಯರಾದ ವಿನೋದ್ ಚೌಡ, ರಂಗನಾಥ್, ಮೊಗಪ್ಪಗೌಡ, ಸಂದೇಶ್, ಯೋಗೇಶ್ ಗೌಡ, ರೇವಣ್ಣಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು ಸಲಹೆ
  • ಪರಿಸರ ಜಾಗೃತಿ ಕಾರ್ಯಕ್ರಮ
ಬೇಲೂರು: ಪ್ರಕೃತಿ ಸಂರಕ್ಷಣೆಗೆ ಎಲ್ಲರೂ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು ಹೇಳಿದರು.
ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಯುರೋ ಕಿಡ್ಸ್ ಶಾಲೆ ಸಮೀಪದ ಉದ್ಯಾನವನದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಟ್ಟು ಮಾತನಾಡಿದರು.
ಪ್ರಕೃತಿಯನ್ನು ನಾವು ಸಂರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಮುಂದಿನ ಪೀಳಿಗೆಗೂ ಆರೋಗ್ಯಕರ ಹಾಗೂ ಸುರಕ್ಷಿತ ವಾತಾವರಣ ನೀಡಲಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಂಡು ನಿಸರ್ಗದ ಉಳಿವಿಗೆ ಪಣ ತೊಡಬೇಕು ಎಂದು ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ಉದ್ದೇಶ ಕೇವಲ ಗಿಡ ನೆಡುವುದಲ್ಲ. ನೆಟ್ಟ ಗಿಡಗಳನ್ನು ಪೋಷಿಸಿ ಉಳಿಸಿ ಬೆಳೆಸುವ
ಜವಾಬ್ದಾರಿಯ ಬಗ್ಗೆಯೂ ಪ್ರತಿಯೊಬ್ಬರಲ್ಲಿ ಅರಿವು ಮೂಡಿಸಬೇಕು ಎಂದರು.
ಗಿಡ, ಮರ ಸಂರಕ್ಷಣೆಯು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇದನ್ನು ನಾವು
ದೊಡ್ಡ ಸೇವೆ ಎಂದು ಭಾವಿಸಿ ಮಾಡಿದರೆ ಮಾತ್ರ ಮಾನವನ ಬದುಕು ಉಳಿಯುತ್ತದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಸಮಾಜಮುಖಿ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಿದೆ. ಇದಕ್ಕೆ ಎಲ್ಲರೂ ಕೈಜೋಡಿಸಿ ಹಸಿರು ಕರ್ನಾಟಕ ಹಾಗೂ ಸ್ವಚ್ಛ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ರೋಟರಿ ಕ್ಲಬ್ ಸಹಾಯಕ ಪ್ರಾಂತಪಾಲ ಡಾ.ಎಸ್.ಗಣೇಶ್ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವುದು ಇಂದಿನ ನಾಗರಿಕರ ಮಹತ್ವದ ಜವಾಬ್ದಾರಿಯಾಗಿದೆ. ಪ್ರಕೃತಿಯ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ತಮ್ಮ ತಮ್ಮಮಟ್ಟದಲ್ಲಿ ಗಿಡಗಳನ್ನು ಸಂರಕ್ಷಣೆ ಮಾಡಬೇಕು ಎಂದರು.
ಪುರಸಭೆ ಸದಸ್ಯೆ ಸೌಮ್ಯಾ ಮಾತನಾಡಿ, ಪರಿಸರ ಸಂರಕ್ಷಣೆಗೆ ರೋಟರಿ ಕ್ಲಬ್ ಆದ್ಯತೆ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದರು.
ಸಂಸ್ಥೆ ಕಾರ್ಯದರ್ಶಿ ರಾಘವೇಂದ್ರ, ಸದಸ್ಯರಾದ ವಿನೋದ್ ಚೌಡ, ರಂಗನಾಥ್, ಮೊಗಪ್ಪಗೌಡ, ಸಂದೇಶ್, ಯೋಗೇಶ್ ಗೌಡ, ರೇವಣ್ಣಗೌಡ, ಅದ್ದೂರಿ ಕುಮಾರ್, ಡ್ಯಾನಿ ಸೇರಿದಂತೆ ಇತರರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net