

ಪ್ರಮುಖ ಮುಖ್ಯಾಂಶಗಳು
ಹಾಸನ: ನಗರದಲ್ಲಿ ಅನೇಕ ವರ್ಷಗಳಿಂದ ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಪೊಲೀಸ್ ಇಲಾಖೆ ಎಷ್ಟೇ ಶ್ರಮ ಹಾಕಿದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ ಎಂದು ಅಪರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಬೇಸರ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಸಂಚಾರ ನಿಯಮ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಬಹುತೇಕ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುತ್ತಾರೆ. ಫುಟ್‌ಪಾತ್ ಸಮಸ್ಯೆ ಹೆಚ್ಚಾಗಿದೆ. ಪಾದಚಾರಿಗಳು ಫುಟ್‌ಪಾತ್ ಮೇಲೆ ನಡೆಯುವುದು ಅವರ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಫುಟ್‌ಪಾತ್ ಮೇಲೆ ಬಡವರು ಬದುಕುತ್ತಿದ್ದಾರೆ. ಹೀಗಾಗಿ ನಾವು ಪಾದಚಾರಿಗಳಿಗೆ ಹಕ್ಕು ನೀಡಬೇಕೋ ಅಥವಾ ಬಡವರು ಜೀವನ ನಡೆಸಲು ಬಿಡಬೇಕಾ ಜನರೇ ತೀರ್ಮಾನಿಸಬೇಕು ಎಂದರು.