ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ತರಬೇತಿ ಅವಶ್ಯ

ಹಾಸನ ನಗರದ ಸಹಕಾರ ಭವನದಲ್ಲಿ ವಿವಿಧ ರೀತಿಯ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಣ ಕಾರ್ಯಕ್ರಮ ಗಣ್ಯರು ಉದ್ಘಾಟಿಸಿದರು. ಎಸ್.ಎನ್.ಪ್ರಕಾಶ್, ವಿ.ಎನ್.ರಾಜಣ್ಣ, ಡಿ.ಪಿ.ಸೋಮೇಗೌಡ, ನಿರ್ದೇಶಕ ವಿ.ಎನ್.ರಾಜಣ್ಣ, ನಾಗರಾಜು, ಪದ್ಮರಾಜ್ ಇತರರಿದ್ದರು.
ಹಾಸನ ನಗರದ ಸಹಕಾರ ಭವನದಲ್ಲಿ ವಿವಿಧ ರೀತಿಯ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಣ ಕಾರ್ಯಕ್ರಮ ಗಣ್ಯರು ಉದ್ಘಾಟಿಸಿದರು. ಎಸ್.ಎನ್.ಪ್ರಕಾಶ್, ವಿ.ಎನ್.ರಾಜಣ್ಣ, ಡಿ.ಪಿ.ಸೋಮೇಗೌಡ, ನಿರ್ದೇಶಕ ವಿ.ಎನ್.ರಾಜಣ್ಣ, ನಾಗರಾಜು, ಪದ್ಮರಾಜ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ತರಬೇತಿ ಅವಶ್ಯ
  • ಎಸ್.ಎನ್.ಪ್ರಕಾಶ್ ಅಭಿಪ್ರಾಯ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಣ ಕಾರ್ಯಕ್ರಮ
ಹಾಸನ: ಸಹಕಾರ ತತ್ವಗಳ ಅನುಷ್ಠಾನದಿಂದ ಸಹಕಾರ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಸಿಬ್ಬಂದಿಗೆ ಸಹಕಾರ ಶಿಕ್ಷಣ ತರಬೇತಿ ಅತಿಅವಶ್ಯ ಎಂದು ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಸ್.ಎನ್.ಪ್ರಕಾಶ್ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಹಾಸನ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಆಶ್ರಯದಲ್ಲಿ ನಗರದ ಸಹಕಾರ ಭವನದಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿನ ವಿವಿಧ ರೀತಿಯ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ಸಹಕಾರ ಕ್ಷೇತ್ರದಲ್ಲಿ ಸಹಕಾರ ಸಂಘಗಳ ಪಾತ್ರ ದೊಡ್ಡದು. ಕಾರಣ ದಿನನಿತ್ಯ ಸದಸ್ಯರೊಂದಿಗೆ ಹಣಕಾಸಿನ ವ್ಯವಹಾರ ನಡೆಸುತ್ತಿದ್ದು, ಅಲ್ಲಿನ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಯ ಪ್ರಾಮಾಣಿಕ ಸೇವೆಯೇ ಪ್ರಮುಖ ಕಾರಣ. ಹಾಗಾಗಿ ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರು ನೀಡುವ ಮಾಹಿತಿಯ ಸದುಪಯೋಗಪಡಿಸಿಕೊಂಡು ಸಹಕಾರ ಸಂಘಗಳ ಕಾನೂನು ಮತ್ತು ನಿಯಮಗಳಿಗೆ ಅನುಗುಣವಾಗಿ ಕೆಲಸ ನಿರ್ವಹಿಸಬೇಕು ಎಂದರು.
ಒಕ್ಕೂಟದ ನಿರ್ದೇಶಕ ವಿ.ಎನ್.ರಾಜಣ್ಣ ಮಾತಮಾಡಿ, ಇಂದು ಸಹಕಾರ ಕ್ಷೇತ್ರವು ತನ್ನದೇ ಆದ ಛಾಪನ್ನು ಮೂಡಿಸಿ ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತಿದೆ. ಹಾಗಾಗಿ ಸಹಕಾರ ಸಂಘಗಳ ಆಡಳಿತ ಮಂಡಳಿ, ಸಿಬ್ಬಂದಿಗೆ ದಿನ ನಿತ್ಯದ ವ್ಯವಹಾರಗಳ ಕುರಿತಂತೆ ಅರಿಯುವುದು ಹಾಗೆಯೇ ತರಬೇತಿಗಳಲ್ಲಿ ಭಾಗವಹಿಸಿ ದಿನದಿಂದ ದಿನಕ್ಕೆ ಆದ ಬದಲಾವಣೆಗಳ ಕುರಿತಂತೆ ತಿಳಿದು ಅದನ್ನು ಸಂಘಗಳ ಅಭಿವೃದ್ಧಿಗೆ ಪೂರಕವಾಗುವಂತೆ ಸಹಕಾರ ತತ್ವಗಳಿಗೆ ಅನುಗುಣವಾಗಿ ಕೆಲಸ ನಿರ್ವಹಿಸಬೇಕೆಂದರು.
ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿ.ಪಿ.ಸೋಮೇಗೌಡ, ನಿರ್ದೇಶಕ ವಿ.ಎನ್.ರಾಜಣ್ಣ, ನಾಗರಾಜು, ಪದ್ಮರಾಜ್, ಪ್ರವೀಣ್, ಸಿದ್ದೇಶ್, ಬೇಲೂರಿನ ಸಹಕಾರ ಅಭಿವೃದ್ಧಿ ಅಧಿಕಾರಿ, ಗುರುಮೂರ್ತಿ, ಮೈಸೂರು ಕೆಐಸಿಎಂನ ಉಪನ್ಯಾಸ ಪೃಥ್ವಿರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net