ಗಾಯಕಿ ಎಸ್.ಜಾನಕಿಗೆ ನುಡಿ ನಮನ

ಅರಕಲಗೂಡಿನಲ್ಲಿ ಹಿರಿಯ ಗಾಯಕಿ ಡಾ.ಎಸ್.ಜಾನಕಿ ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೋಡು ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಮೋಹನ್, ಎನ್.ರವಿಕುಮಾರ್, ವಿಷ್ಣು ಪ್ರಕಾಶ್ ಇತರರಿದ್ದರು.
ಅರಕಲಗೂಡಿನಲ್ಲಿ ಹಿರಿಯ ಗಾಯಕಿ ಡಾ.ಎಸ್.ಜಾನಕಿ ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೋಡು ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಮೋಹನ್, ಎನ್.ರವಿಕುಮಾರ್, ವಿಷ್ಣು ಪ್ರಕಾಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • S. Janaki

ಅರಕಲಗೂಡು:

ಪಟ್ಟಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ನುಡಿ ನಮನದ ಮೂಲಕ ಇತ್ತೀಚೆಗೆ ನಿಧನರಾದ ಹಿರಿಯ ಗಾಯಕಿ ಡಾ.ಎಸ್.ಜಾನಕಿ ಅವರನ್ನು ಸ್ಮರಿಸಲಾಯಿತು.

ಪಟ್ಟಣದ ಖಾಸಗಿ ಕಲ್ಯಾಣ ಮಂಪಟದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ ಲಿಂಗಾಯತ ಜನಪಯೋಗಿ ಸೌಹಾರ್ದ ಸಂಘ, ವಿಷ್ಣು ಸೇನಾ ಸಮಿತಿ, ತಾಲೂಕು ಛಾಯಾಗ್ರಾಹಕರ ಸಂಘ ಹಾಗೂ ವಿಶ್ವ ಚೇತನ ಜೈ ಭೀಮ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ‘ಬಾನಲ್ಲೂ ನೀನೇ, ಭುವಿಯಲ್ಲೂ ನೀನೇ’ ಶೀರ್ಷಿಕೆಯಡಿ ಆಯೋಜಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಜಾನಕಿ ಅವರ ಭಾವಚಿತ್ರಕ್ಕೆ ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಬೆಂಗಳೂರು ಜಯದೇವ ಆಸ್ಪತ್ರೆಯ ವೈದ್ಯ ಡಾ.ಮೋಹನ್ ಮಲ್ಲಪ್ಪ ಮಾತನಾಡಿ, ಸಾವಿರಾರು ಕನ್ನಡ ಚಿತ್ರಗೀತೆಗಳಿಗೆ ತಮ್ಮ ಸುಮಧುರ ಕಂಠದ ಮೂಲಕ ಜೀವ ತುಂಬಿದ ಎಸ್.ಜಾನಕಿ ಅವರ ಕಲಾಸೇವೆ ಅಪಾರ. ತಮ್ಮ ವಿಶಿಷ್ಟ ಗಾಯನದ ಮೂಲಕ ಹಲವು ದಶಕಗಳ ಕಾಲ ಸಂಗೀತ ಪ್ರಿಯರ ಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಅವರ ಅಗಲಿಕೆ ಕನ್ನಡಿಗರು ಹಾಗೂ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು.
ಕಾರ್ಯಕ್ರಮದಲ್ಲಿ ಕಲಾವಿದರು ಎಸ್.ಜಾನಕಿ ಅವರು ಹಾಡಿರುವ ಜನಪ್ರಿಯ ಗೀತೆಗಳನ್ನು ಹಾಡುವ ಮೂಲಕ ಅವರನ್ನು ಸ್ಮರಿಸಿದರು. ಸಂಗೀತಾಭಿಮಾನಿಗಳು ಭಾವುಕರಾದರು.
ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೋಡು ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವಿಷ್ಣು ಪ್ರಕಾಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಿವಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net