ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,05,536 ಐದು ವರ್ಷದ ಒಳಗಿನ ಮಕ್ಕಳಿದ್ದು, ಪೋಲಿಯೋದಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಜೂ. 28ರಂದು ಲಸಿಕೆ ಹಾಕಲು 872 ಬೂತ್ ಗಳನ್ನು ಸ್ಥಾಪಿಸಲಾಗಿದೆ. ಜತೆಗೆ 3,584 ವ್ಯಾಕ್ಸಿನೇಟರ್‌ಗಳನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಮೂರು ದಿನ ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನ ಲಸಿಕಾ ಕಾರ್ಯಕ್ರಮ ನಡೆಯುವುದರಿಂದ ಪಾಲಕರು ಗಮನವಹಿಸಿ ಮಕ್ಕಳಿಗೆ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ತಿಳಿಸಿದರು.