ಆಕ್ಸ್‌ಫರ್ಡ್ ಶಾಲೆಯ ದೈಹಿಕ ಶಿಕ್ಷಕ ಹಾಗೂ ತರಬೇತುದಾರ ಮಂಜುನಾಥ್ ಮಾತನಾಡಿ, ಮಲೆನಾಡು ಭಾಗದಲ್ಲಿ ವರ್ಷದ ಹೆಚ್ಚಿನ ತಿಂಗಳು ಮಳೆ ಇರುವುದರಿಂದ ಹೊರಾಂಗಣ ಕ್ರೀಡೆಗಳ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ವೇದಿಕೆ ಕಲ್ಪಿಸಲು ಈ ಶಿಬಿರ ಆಯೋಜಿಸಲಾಗಿದೆ. ಶಿಬಿರಕ್ಕೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 5ನೇ ತರಗತಿಯಿಂದ ಪಿಯುಸಿ ವರೆಗಿನ ಯಾವುದೇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಮಕ್ಕಳನ್ನು ಪರಿಪೂರ್ಣ ಆಟಗಾರರನ್ನಾಗಿ ರೂಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.