ಪಟ್ಟಣದ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮುಂದಿನ ಮೂರು ತಿಂಗಳಕಾಲ ನಡೆಯುವ ಅಭಿಯಾನದಲ್ಲಿ 14 ವರ್ಷದೊಳಗಿನ ವಯೋಮಿತಿಯ 1550 ಹೆಣ್ಣುಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಈ ಲಸಿಕೆ ಸಹಾಯಕವಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳಿಗೆ ಕಿವಿಗೊಡದೆ ಹೆಣ್ಣುಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡುವಂತೆ ತಿಳಿಸಿದರು.