30ರಂದು ವೈಕುಂಠ ಏಕಾದಶಿ ಮಹೋತ್ಸವ

ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಉತ್ಸವ ಮೂರ್ತಿಗಳನ್ನು ಆಲಂಕರಿಸಿ, ಪೂಜಿಸಲಾಯಿತು.
ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಉತ್ಸವ ಮೂರ್ತಿಗಳನ್ನು ಆಲಂಕರಿಸಿ, ಪೂಜಿಸಲಾಯಿತು.
Published on
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಮಹೋತ್ಸವ ಪ್ರಯುಕ್ತ ಡಿ.30ರ ಮಂಗಳವಾರ ವಿಶೇಷ ಪೂಜಾ ಮಹೋತ್ಸವ ಆಯೋಜನೆ ಮಾಡಲಾಗಿದೆ.
ಸ್ವಾಮಿಯ ಮೂಲ ಮೂರ್ತಿಗೆ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜೆ ನಂತರ ಶ್ರೀ ಅಂಡಾಳ್ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಹಾಗೂ 10 ಗಂಟೆಗೆ ಸ್ವಾಮಿಯವರು ಮತ್ತು ಶ್ರೀ ಅಂಡಾಳ್ ಅಮ್ಮನ ಪ್ರಾಕಾರೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಪಟ್ಟಣದ ದೇವಾಂಗ ಶ್ರೀ ರಾಮಮಂದಿರ, ರಾಯರಾವೂತರ ಶ್ರೀ ವೆಂಕಟರಮಣಸ್ವಾಮಿ ದೇವಾಲಯ, ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ ಹಾಗೂ ಮಾವಿನಕೆರೆ ಶ್ರೀ ವೆಂಕಟರಮಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net