ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ದಂಡ

 ನಗರದ ವಿವಿಧ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಮನಬಂದಂತೆ ನಿಲುಗಡೆ ಮಾಡಿದ ಸವಾರರಿಗೆ ದಂಡ ವಿದಿಸುತ್ತಿರುವ ಪೋಲೀಸ್ ಸಿಬ್ಬಂದಿ.
ನಗರದ ವಿವಿಧ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಮನಬಂದಂತೆ ನಿಲುಗಡೆ ಮಾಡಿದ ಸವಾರರಿಗೆ ದಂಡ ವಿದಿಸುತ್ತಿರುವ ಪೋಲೀಸ್ ಸಿಬ್ಬಂದಿ.
Published on

ವಿರಾಜಪೇಟೆ:

ಹಲವು ದಿನಗಳಿಂದ ಸಾರ್ವಜನಿಕರಿಗೆ ತಲೆನೋವಾಗಿದ್ದ ನಗರದ ಟ್ರಾಫಿಕ್ ಅವ್ಯವಸ್ಥೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ನಗರದ ವಿವಿಧ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನಗಳನ್ನು ಮನಬಂದಂತೆ ನಿಲುಗಡೆ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಪಾದಚಾರಿಗಳಿಗೂ ಸಂಚರಿಸಲು ತೀವ್ರ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರು ದಂಡ ವಿಧಿಸುವ ಕಾರ್ಯ ಕೈಗೊಂಡಿದ್ದಾರೆ.
ಪೊಲೀಸರ ಈ ಕ್ರಮದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಸುಗಮಗೊಳ್ಳಲು ನೆರವಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂತಹ ಕಟ್ಟುನಿಟ್ಟಿನ ಕ್ರಮಗಳು ನಿರಂತರವಾಗಿ ಮುಂದುವರಿದರೆ ವಾಹನ ಸವಾರರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಹೆಚ್ಚುವುದರೊಂದಿಗೆ ಟ್ರಾಫಿಕ್ ಸಮಸ್ಯೆಯೂ ಗಣನೀಯವಾಗಿ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net