ಬೇಲೂರಿನ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ
ತಾಲೂಕು ಕಚೇರಿ
ಬೇಲೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು.
ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ವಿಶ್ವಕರ್ಮ ಸಮಾಜ ಶತಮಾನಗಳಿಂದ ದೇಶದ ಆರ್ಥಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಪ್ರಸಿದ್ಧ ದೇವಾಲಯಗಳ ಶಿಲ್ಪಕಲೆ, ವಾಸ್ತುಶಿಲ್ಪ, ಲೋಹ, ಮರ, ಕಲ್ಲು ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಇಂತಹ ಶ್ರೀಮಂತ ಪರಂಪರೆಯನ್ನು ಇಂದಿನ ಪೀಳಿಗೆಯ ಯುವಕರು ಅರಿತು ಮುಂದುವರಿಸ ಬೇಕಾಗಿದೆ ಎಂದರು.
ಸರ್ಕಾರದಿಂದ ವಿಶ್ವಕರ್ಮ ಸಮಾಜಕ್ಕೆ ದೊರೆಯುತ್ತಿರುವ ವಿವಿಧ ಸೌಲಭ್ಯಗಳು, ಯೋಜನೆಗಳು, ಶೈಕ್ಷಣಿಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯುವಕರು ಶಿಕ್ಷಣ, ಸ್ವಉದ್ಯೋಗ ಕ್ಷೇತ್ರಗಳಲ್ಲಿ ಮುಂದೆ ಬರಬೇಕು. ಜತೆಗೆ ಸಮಾಜ ಒಗ್ಗಟ್ಟಿನಿಂದ ಇದ್ದರೆ ಮಾತ್ರ ಪ್ರಗತಿ ಸಾಧ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮಾತನಾಡಿ, ವಿಶ್ವಕರ್ಮರ ಶ್ರಮ, ಸೃಜನಶೀಲತೆ ಹಾಗೂ ನೈಪುಣ್ಯದ ಜೀವಂತ ಪ್ರತೀಕವಾಗಿದ್ದಾರೆ. ಸಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕರು, ಶಿಲ್ಪಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶ್ವಕರ್ಮರ ಕೊಡುಗೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಂದಿನ ಯುವಜನತೆ ವಿಶ್ವಕರ್ಮರ ಆದರ್ಶಗಳು, ಶ್ರಮ ಸಂಸ್ಕೃತಿ. ಆತ್ಮಗೌರವವನ್ನು ಅಳವಡಿಸಿಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಬಿಆರ್‌ಸಿ ಶಿವಮರಿಯಪ್ಪ, ಹರೀಶ್, ಸಮಾಜದ ಮುಖಂಡರಾದ ಉಮೇಶ್ ಆಚಾರ್, ನಾಗೇಶ್ ಆಚಾರ್, ಹಿತೇಶ್ ಸಚ್ಚಾನಿಯ ಟೀನು, ನಾರಾಯಣಾಚಾರ್, ಅರುಣಾಚಲಂ, ವಿಶ್ವನಾಥ್‌ಆಚಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.