ಯುವ ಪೀಳಿಗೆಯ ಮತದಾನ ಬಹಳ ಮುಖ್ಯ

ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಕಚೇರಿ ಹಾಗೂ ಹಾಸನ ಜಿಲ್ಲಾಡಳಿತದ ಆಶ್ರಯದಲ್ಲಿ ಹಾಸನ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮ ಗಣ್ಯರು ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೇಮಾವತಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಗಿರಿಗೌಡ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಇತರರಿದ್ದರು.
ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಕಚೇರಿ ಹಾಗೂ ಹಾಸನ ಜಿಲ್ಲಾಡಳಿತದ ಆಶ್ರಯದಲ್ಲಿ ಹಾಸನ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮ ಗಣ್ಯರು ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೇಮಾವತಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಗಿರಿಗೌಡ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯುವ ಪೀಳಿಗೆಯ ಮತದಾನ ಬಹಳ ಮುಖ್ಯ
  • ಪ್ರಧಾನ ಜಿಲ್ಲಾ, ಸತ್ರ ನ್ಯಾಯಾಧೀಶೆ ಹೇಮಾವತಿ ಅಭಿಪ್ರಾಯ
  • ರಾಷ್ಟ್ರೀಯ ಮತದಾನ ದಿನಾಚರಣೆ
ಹಾಸನ: ರಾಷ್ಟ್ರಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡುವಲ್ಲಿ ಯುವ ಪೀಳಿಗೆಯ ಮತದಾನ ಬಹಳ ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ಹೇಳಿದರು.
ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಕಚೇರಿ ಹಾಗೂ ಹಾಸನ ಜಿಲ್ಲಾಡಳಿತದ ಆಶ್ರಯದಲ್ಲಿ ಹಾಸನ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾನ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಭಾರತೀಯರು 18 ವರ್ಷದ ನಂತರ ಸ್ವತಂತ್ರೃವಾಗಿ ಮತದಾನದ ಮೂಲಕ ತಮ್ಮ ಹಕ್ಕು ಚಲಾಯಿಸುವ ಅಧಿಕಾರ ಹೊಂದಿದ್ದಾರೆ. ಅದರಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಭಾರತ ದೇಶ ಪ್ರತಿಯೊಬ್ಬರ ಆಸ್ತಿಯಾಗಿದೆ. ಸಂವಿಧಾನಬದ್ಧ ಮತದಾನದ ಹಕ್ಕುಗಳನ್ನು ಪ್ರತಿಯೊಬ್ಬರೂ ಪಡೆದಿರುತ್ತಾರೆ. ಮತ ಚಲಾಸುವುದು ನಮ್ಮೆಲ್ಲರ ಜವಾಬ್ದಾರಿಯೂ ಆಗಿದೆ. ಮತದಾನ ಪಟ್ಟಿಯಲ್ಲಿ ಸುತ್ತ ಮುತ್ತಲಿನವರನ್ನು ಸೇರ್ಪಡೆಗೊಳಿಸಲು ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.
ಯುವ ಪೀಳಿಗೆ ಮತದಾನದಲ್ಲಿ ಭಾಗವಹಿಸದಿರುವುದು ಹಾಗೂ ಮತದಾನ ಪಟ್ಟಿ ಸೇರ್ಪಡೆ ಆಸಕ್ತಿ ತೋರಿಸದಿರುವುದು ವಿಷಾದನೀಯ, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರ ಪಟ್ಟಿಯಲ್ಲಿ ಮೊದಲ ನೋಂದಣಿ ಮಾಡಿಕೊಳ್ಳುವುದು ಕರ್ತವ್ಯವಾಗಿದೆ. ಇಂದಿನ ಪ್ರಜೆಗಳು ಮುಂದಿನ ಭವಿಷ್ಯವಾಗಿದ್ದಾರೆ. ಯುವ ಸಮುದಾಯ ದೇಶಕ್ಕೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು, ಅಭಿವೃದ್ಧಿ ಹಾದಿಯಲ್ಲಿ ಸಾಗಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ದೇಶ ಕಟ್ಟುವ ರಾಜಕೀಯ ಪ್ರಜ್ಞೆ ಇರಬೇಕು. ಯುವ ಮತದಾರರು ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರತಿಯೊಬ್ಬರಿಗೂ ಮತದಾನದ ಪಟ್ಟಿಯಲ್ಲಿ ಹೆಸರು ಇರಬೇಕು ಎಂದರು.
ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು, ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಪಣಕ್ಕಿಟ್ಟು, ಬಲಿದಾನ, ಶ್ರಮದಿಂದ ಸ್ವಾತಂತ್ಯವನ್ನು ತಂದುಕೊಟ್ಟಿದ್ದಾರೆ. ಹಾಗಾಗಿ ಇತಿಹಾಸವನ್ನು ಅರಿತು ಪ್ರತಿನಿಧಿಗಳ ಆಯ್ಕೆ ಮಾಡಬೇಕು ಎಂದರು.
ಇಂದು 16ನೇ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ರಾಜ್ಯದಲ್ಲಿ ಜಿಲ್ಲೆ ಶೇಕಡವಾರು ಮತದಾನದಲ್ಲಿದ್ದು, ಸ್ವೀಪ್ ವತಿಯಿಂದ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಭೇಟಿ ನೀಡಿ, ಯುವ ಮತದಾರರ ನೋಂದಣಿ ಮಾಡಿಸಬೇಕು ಎಂದರು.
ಜಿಲ್ಲೆಯಲ್ಲಿ 26 ಸಾವಿರ ಹೊಸ ಯುವ ಮತದಾರರು ಸೇರ್ಪಡೆಯಾಗಿದ್ದಾರೆ, 15 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ, ಜಿಲ್ಲೆಯಲ್ಲಿ ಹೆಚ್ಚು ಮಹಿಳಾ ಮತದಾರಿದ್ದು, ಪ್ರತಿಯೊಬ್ಬರಲ್ಲಿಯೂ ರಾಜಕೀಯ ಪ್ರಜ್ಞೆ ಹೊಂದಬೇಕು. ರಾಜ್ಯದಲ್ಲಿ 2025-26 ರ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ನಡೆಯುತ್ತಿದೆ. ಹಿಂದೆ 2001ರಲ್ಲಿ ಮ್ಯಾಪಿಂಗ್ ಕಾರ್ಯ ಮಾಡಲಾಗಿತ್ತು ಎಂದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಭಾರ ಸದಸ್ಯ ಕಾರ್ಯದರ್ಶಿ ಗಿರಿಗೌಡ ಮಾತನಾಡಿ, ಮತದಾನ ಶೇಕಡಾವಾರು ಕುಸಿಯುತ್ತಿದೆ. ಗ್ರಾಮೀಣ ಭಾಗದಲ್ಲಿ ಮತದಾನವಾಗುತ್ತಿದೆ. ಆದರೆ ನಗರ ಭಾಗದಲ್ಲಿಯೇ ಮತದಾನ ಕಡಿಮೆಯಾಗುತ್ತಿದೆ ಇದು ವಿಷಾದನೀಯ ಎಂದರು.
ಜಾತಿ ಧರ್ಮ ಬಿಟ್ಟು ಉತ್ತಮ ನಾಯಕರನ್ನು ಮತದಾನದ ಮೂಲಕ ಆಯ್ಕೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಮಾತನಾಡಿ, ಭಾರತ 2011ರಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಮೊದಲ ಬಾರಿಗೆ ಆರಂಭಿಸಲಾಯಿತು. ಇಂದು ಭಾರತ ಚುನಾವಣಾ ಆಯೋಗದ ನಮ್ಮಭಾರತ ನನ್ನ ಹಕ್ಕು ಎಂಬ ಧ್ಯೆಯವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಯು ಅರ್ಹ ಮತದಾರ ಜಾಗೃತಿಯನ್ನು ಮೂಡಿಸುವ ಕೆಲಸ ಹಾಗೂ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಅರಿವು ಮೂಡಿಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಚುನಾವಣೆ ಪ್ರಕಿಯ ಕುರಿತು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ, ತಹಸೀಲ್ದಾರ್ ಗೀತಾ, ಡಿವೈಎಸ್ಪಿ ಗಂಗಾಧರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net