ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ರಾತ್ರಿ ಸುಮಾರು 10 ಗಂಟೆಗೆ ತಿಮ್ಮಕ್ಕ ಅವರ ಪಾರ್ಥಿವಶರೀರವನ್ನು ಪಟ್ಟಣದ ಜೂನಿಯರ್ ಕಾಲೇಜು ಮೈದಾನಕ್ಕೆ ಕರೆತರಲಾಯಿತು. ಮೊದಲಿಗೆ ತಾಲೂಕು ಆಡಳಿತದಿಂದ ಮೊದಲಿಗೆ ಗೌರವ ಸಲ್ಲಿಸಲಾಯಿತು. ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಸ್ವಾಮೀಜಿ, ಶಾಸಕ ಎಚ್.ಕೆ.ಸುರೇಶ್, ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ಪುರಸಭೆ ಮಾಜಿ ಅಧ್ಯಕ್ಷೆ ತೀರ್ಥ ಕುಮಾರಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಸೇರಿದಂತೆ ನೂರಾರು ಸಾರ್ವಜನಿಕರು ಅಂತಿಮ ದರ್ಶನ ಪಡೆದರು.