ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ಬೆಟ್ಟದಪುರ ಸಮೀಪದ ಸಾಲುಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿಗಳವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಜು, ಮುಖ್ಯಶಿಕ್ಷಕ ಕೆ.ಸಿ ಸತೀಶ್, ಹಿರಿಯ ವಿದ್ಯಾರ್ಥಿಗಳಾದ ವಿಷ್ಣು ಅಶೋಕ್, ಧನುಪಾಲ್ ಬಸವರಾಜು ಇತರರು ಇದ್ದರು.
ಬೆಟ್ಟದಪುರ ಸಮೀಪದ ಸಾಲುಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿಗಳವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಜು, ಮುಖ್ಯಶಿಕ್ಷಕ ಕೆ.ಸಿ ಸತೀಶ್, ಹಿರಿಯ ವಿದ್ಯಾರ್ಥಿಗಳಾದ ವಿಷ್ಣು ಅಶೋಕ್, ಧನುಪಾಲ್ ಬಸವರಾಜು ಇತರರು ಇದ್ದರು.
Published on
ಬೆಟ್ಟದಪುರ: ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪಾಲಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಕಾರ ಮಹತ್ವದ್ದು ಎಂದು ಸಾಲುಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕೆ.ಸಿ ಸತೀಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಸಾಲುಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹಿರಿಯ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ಅಗತ್ಯ. ಶುದ್ಧ ಕುಡಿಯುವ ನೀರು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿರುವುದು ಶ್ಲಾಘನೀಯ. ಶಾಲೆಯ ಅಭಿವೃದ್ಧಿಗೆ ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದೇ ರೀತಿ ಸಹಕಾರ ನೀಡಿದರೆ ವಿದ್ಯಾರ್ಥಿಗಳಿಗೆ ಇನ್ನಷ್ಟು ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಜು, ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಮೋಹನ್ ಕುಮಾರ್, ಶಿವರಾಜು, ಹರೀಶ, ಸಣ್ಣರಾಮೇಗೌಡ, ತೀರ್ಥಗೌಡ, ಪ್ರಮೋದ್, ಶಿವಕುಮಾರ್, ಪ್ರತಾಪ್, ಶಿಕ್ಷಕರಾದ ಧರ್ಮ, ರಘು, ಮೋಹನ್ ಕುಮಾರ್, ರತ್ನಮ್ಮ, ಸೌಮ್ಯ, ಗ್ರಾಮದ ಮುಖಂಡರಾದ ಪುಟ್ಟರಾಜು, ಬೋರಪ್ಪ ನಾಯಕ, ಚನ್ನೇಗೌಡ, ಮಂಜುನಾಥ್ ಸೇರಿದಂತೆ ಹಿರಿಯ ವಿದ್ಯಾರ್ಥಿಗಳಾದ ವಿಷ್ಣು ಅಶೋಕ್, ಧನುಪಾಲ್ ಬಸವರಾಜು, ಅನಿಲ್ ರತ್ನಮ್ಮ, ಕೀರ್ತಿ ನಟರಾಜ್, ವಿಜಯ್ ಕುಮಾರ್ ಲತಾ, ಶಿವು ಭಾಗ್ಯಮ್ಮ, ಸುನಿಲ್ ಮಂಜಣ್ಣ, ಅಭಿಷೇಕ್ ಪ್ರಕಾಶ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net