ರೈತನ ಮೇಲೆ ಕಾಡಾನೆ ದಾಳಿ

ಗಾಯಗೊಂಡ ಮಲ್ಲೇಶ್
ಗಾಯಗೊಂಡ ಮಲ್ಲೇಶ್
Published on
ಸಕಲೇಶಪುರ: ತಾಲೂಕಿನ ಶಾಂತಪುರ ಗ್ರಾಮದಲ್ಲಿ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿಗೆ ರೈತನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಂತಪುರ ಗ್ರಾಮದ ಮಲ್ಲೇಶ್(54) ಗಾಯಗೊಂಡವರು. ಸಂಜೆ ತಮ್ಮ ಗದ್ದೆಯಿಂದ ದನಗಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗಮಧ್ಯೆ ಏಕಾಏಕಿ ಎದುರಾದ ಒಂಟಿ ಸಲಗ ದಾಳಿ ನಡೆಸಿದೆ. ಪರಿಣಾಮ ಬಲಗಾಲಿನ ಕಾಲಿನ ಮೂಳೆ ಮುರಿದಿದೆ.
ಗಾಯಗೊಂಡ ಮಲ್ಲೇಶ್ ಅವರನ್ನು ಸ್ಥಳೀಯರು ತಕ್ಷಣ ಸಕಲೇಶಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.
ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net