ಕೃಷಿ ಇಲಾಖೆ ಮಾಹಿತಿ ಪ್ರಕಾರ ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿನಲ್ಲಿ 47,511 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಹೊಂದಿದ್ದು ಮಳೆಯಾಗದೆ ಕೇವಲ 760 ಹೆಕ್ಟೇರ್ ಪ್ರದೇಶದಲ್ಲಷ್ಟೇ ಬಿತ್ತನೆ ಮಾಡಲಾಗಿದೆ. ಇದರಿಂದಾಗಿ ಶೇ.1.60ರಷ್ಟು ಶೂನ್ಯ ಸಾಧನೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ 7006 ಹೆಕ್ಟೇರ್‌ನಲ್ಲಿ ಮತ್ತು ನೀರಾವರಿ ಪ್ರದೇಶದಲ್ಲಿ 285 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಗುರಿ ಹೊಂದಿದ್ದು, ಶೂನ್ಯ ಸಾಧನೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ 20323 ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ ಬಿತ್ತಬೇಕಿದ್ದು ಮಳೆಯಿಲ್ಲದೆ ಬಿತ್ತನೆ ಮಾಡಲಾಗಿಲ್ಲ. ಇನ್ನು ನೀರಾವರಿ ಆಶ್ರಯದಲ್ಲಿ 2200 ಹೆಕ್ಟೇರ್ ಬದಲಿಗೆ ಕೇವಲ 70 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. 39457 ಹೆಕ್ಟೇರ್ ಪ್ರದೇಶದಲ್ಲಿ ಏಕದಳ ಧಾನ್ಯ ಬೆಳೆಗಳ ಬಿತ್ತನೆ ಹೊಂದಿದ್ದು 70 ಹೆಕ್ಟೇರ್ ನಲ್ಲಷ್ಟೇ ಬಿತ್ತನೆಯಾಗಿದೆ. 10 ಹೆಕ್ಟೇರ್‌ನಲ್ಲಿ ಉದ್ದು ಬಿತ್ತನೆ ಮಾಡಬೇಕಿದ್ದು ಶೂನ್ಯ ಸಾಧನೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ 2628 ಹೆಕ್ಟೇರ್‌ನಲ್ಲಿ ಅಲಸಂದೆ ಗುರಿ ಹೊಂದಿದ್ದು 130 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನೀರಾವರಿ ಪ್ರದೇಶದಲ್ಲಿ 137 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಬೇಕಿದ್ದು ಶೂನ್ಯ ಸಾಧನೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ 50 ಹೆಕ್ಟೇ ನಲ್ಲಿ ತೊಗರಿ ಹಾಗೂ ತಲಾ 75 ಹೆಕ್ಟೇರ್‌ನಲ್ಲಿ ಹುರುಳಿ ಮತ್ತು ಹೆಸರು ಬಿತ್ತಬೇಕಿದ್ದು ಶೂನ್ಯ ಸಾಧನೆಯಾಗಿದೆ. ಒಟ್ಟು 2975 ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬೆಳೆಗಳನ್ನು ಬಿತ್ತಬೇಕಿದ್ದು 130 ಹೆಕ್ಟೇರ್ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ತಲಾ 10 ಹೆಕ್ಟೇರ್‌ನಲ್ಲಿ ನೆಲಗಡಲೆ, ಎಣ್ಣೆಕಾಳು ಬಿತ್ತನೆ ಗುರಿ ಹೊಂದಿದ್ದು ಶೂನ್ಯ ಸಾಧನೆಯಾಗಿದೆ. 5069 ಹೆಕ್ಟೇರ್ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆ ಗುರಿ ಹೊಂದಿದ್ದು 560 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ.