ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ನಂಬಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ ಎಂದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲೆಯಲ್ಲಿ ಕಾರ್ಯಾರಂಭಿಸಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಪೂಜ್ಯರ ಮಾರ್ಗದರ್ಶನದಲ್ಲಿ ಸ್ವ ಸಹಾಯ ಸಂಘಗಳ ಮೂಲಕ ಹಲವು ಜನರು ಉತ್ತಮ ಬದುಕನ್ನು ಕಟ್ಟಿಕೊಂಡು ಆರ್ಥಿಕವಾಗಿ ಸಧೃಢರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸದಸ್ಯರಿಗೆ ಆರ್ಥಿಕ ಸಹಕಾರ ನೀಡುವುದರ ಜತೆಗೆ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಲಾಗುತ್ತಿದೆ ಎಂದರು.
ಸರ್ಕಾರ ಮಾಡಬಹುದಾದ ಕೆಲಸವನ್ನು ಮಾಡುತ್ತಿರುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸುರೇಶ್ ಮೈಲಿ ಮಾತನಾಡಿ, ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಸಂಸ್ಥೆಯು ಮಹಿಳೆಯರಿಗೆ ಉನ್ನತ ಸಾಧನೆ ಮಾಡಲು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಪಡೆಯಲು ಸುಲಭ ವ್ಯವಸ್ಥೆ ಇದೆ. ಮಹಿಳೆಯರು ಶಿಕ್ಷಣ ಪಡೆದು, ಸ್ವ-ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಕೃತಿ, ಸಂಸ್ಕಾರ ಉಳಿಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿ ಎಂದರು.