ಎಲ್ಲ ಕ್ಷೇತ್ರದಲ್ಲೂ ಮಹಿಳೆ ಸಾಧನೆ

ಹೊಳೆನರಸೀಪುರ: ಸಮಾಜದಲ್ಲಿ ಲಿಂಗಸಮಾನತೆ, ಮಹಿಳಾ ಸಬಲೀಕರಣ ಮತ್ತು ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ 1975 ಮಾ. 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು ಎಂದು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕಿ, ಹಾಗೂ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ ನುಡಿದರು.

Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕಿ ಡಾ.ಮಂಜುಳಾ ಅಭಿಮತ
ಹೊಳೆನರಸೀಪುರ: ಸಮಾಜದಲ್ಲಿ ಲಿಂಗಸಮಾನತೆ, ಮಹಿಳಾ ಸಬಲೀಕರಣ ಮತ್ತು ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ 1975 ಮಾ. 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು ಎಂದು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕಿ, ಹಾಗೂ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ ನುಡಿದರು.
ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ  ಸಂಜೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಿಂದೆ ಮಹಿಳೆಯರನ್ನು ಮನೆಯಿಂದ ಹೊರಗೆ ಕಳುಹಿಸುತ್ತಿರಲಿಲ್ಲ. ವಿದ್ಯಾಭ್ಯಾಸ ಕೊಡಿಸುತ್ತಿರಲಿಲ್ಲ. ಕಾಲ ಮುಂದುವರಿದಂತೆ ಮಹಿಳೆಯರು ವಿದ್ಯಾವಂತರಾಗಿ ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಚಿನ್ನಮ್ಮ, ಶ್ರುಶೂಷಕ ಅಧೀಕ್ಷಕಿ ಮೀನಾಕ್ಷಿ ಅವರನ್ನು ಸನ್ಮಾನಿಸಲಾಯಿತು.
ಶುಶ್ರೂಷಕ ಅಧೀಕ್ಷಕಿ ಮೀನಾಕ್ಷಿ, ಮಾತನಾಡಿ, ಹಿಂದೆ ಕಿತ್ತೂರುರಾಣಿ ಚೆನ್ನಮ್ಮ, ಒನಕೆ ಓಬವ್ವ ಸೈನ್ಯದಲ್ಲಿ, ಮದರ್ ತೆರೇಸ ಸೇವೆಯಲ್ಲಿ, ಕಲ್ಪನಾ ಚಾವ್ಲಾ ಸಾಧನೆ ಮಾಡಿ ಮಹಿಳೆಯರು ಯಾವುದಕ್ಕೂ ಕಡಿಮೆ ಇಲ್ಲ ಎನ್ನುವುದನ್ನು ಸಾಬೀತು ಮಾಡಿದರು. ಮಹಿಳೆ ತಾಯಿಯಾಗಿ, ಅಕ್ಕ- ತಂಗಿಯಾಗಿ, ಹೆಂಡತಿಯಾಗಿ, ಶಿಕ್ಷಕಿಯಾಗಿ, ವೈದ್ಯೆಯಾಗಿ, ಶುಶ್ರೂಷಕಿಯಾಗಿ, ಒಳ್ಳೆಯ ಕ್ರೀಡಾಪಟುವಾಗಿ ಪುರುಷರಿಗೆ ಸಮಾನರು ಎನಿಸಿದ್ದಾರೆ. ಇಷ್ಟೆಲ್ಲ್ಲ ಸಾಧನೆ ಮಾಡಿದ ನಂತರ ಮಹಿಳೆಯರ ಅಂತಾರಾಷ್ಟ್ರೀಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ದಿನಾಚರಣೆ ಅಂಗವಾಗಿ ನಡೆಸಿದ ಆಟೋಟ ಸ್ಪರ್ಧಿಗಳಲ್ಲಿ  ವಿಜೇತರಿಗೆ ಬಹುಮಾನ ವಿತರಿಸಿದರು. ನಿವೃತ್ತ ಆಡಳಿತಾಧಿಕಾರಿ ಡಾ. ಲಕ್ಷ್ಮೀಕಾಂತ್, ಡಾ. ಧನಶೇಖರ್, ಅರಿವಳಿಕೆ ತಜ್ಞ ವಿಜಯಕುಮಾರ್, ಡಾ. ಕುಸುಮಾ, ತುಳಸಿಕುಮಾರಿ ಇದ್ದರು. ವೇದಿಕೆ ಕಾರ್ಯಕ್ರಮದ ನಂತರ ವೈದ್ಯರು ಹಾಗೂ ಸಿಬ್ಬಂದಿ ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net