ಕಾಂಗ್ರೆಸ್ ಸಂಘಟನೆಗೆ ಕಾರ್ಯಕರ್ತರು ಆದ್ಯತೆ ನೀಡಲಿ

ಅರಕಲಗೂಡಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಘಟನ ಸೃಜನ್ ಅಭಿಯಾನ ಸಭೆಯನ್ನು ತಮಿಳುನಾಡು ಸಂಸದೆ ಸುಧಾ ಉದ್ಘಾಟಿಸಿದರು. ಗಾಯತ್ರಿ ಶಾಂತೇಗೌಡ, ಸಂದೀಪ್ ಕುಮಾರ್, ಶ್ರೀಧರ್‌ಗೌಡ, ಕೃಷ್ಣೇಗೌಡ, ಲಕ್ಷ್ಮಣ್ ಇತರರಿದ್ದರು.
ಅರಕಲಗೂಡಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಘಟನ ಸೃಜನ್ ಅಭಿಯಾನ ಸಭೆಯನ್ನು ತಮಿಳುನಾಡು ಸಂಸದೆ ಸುಧಾ ಉದ್ಘಾಟಿಸಿದರು. ಗಾಯತ್ರಿ ಶಾಂತೇಗೌಡ, ಸಂದೀಪ್ ಕುಮಾರ್, ಶ್ರೀಧರ್‌ಗೌಡ, ಕೃಷ್ಣೇಗೌಡ, ಲಕ್ಷ್ಮಣ್ ಇತರರಿದ್ದರು.
Published on
ಅರಕಲಗೂಡು: ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಮಿಳುನಾಡಿನ ಸಂಸದೆ ಸುಧಾ ನಿರ್ದೇಶನ ನೀಡಿದರು.
ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಪಟ್ಟಣದ ಚನ್ನಬಸವೇಶ್ವರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಂಘಟನಾ ಸೃಜನ್ ಅಭಿಯಾನದಲ್ಲಿ ಮಾತನಾಡಿದರು.
ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಸಮರ್ಪಕವಾಗಿ ಮಾಡಬೇಕು. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಪಕ್ಷದಲ್ಲಿ ಗುಂಪುಗಾರಿಕೆ ಹಾಗೂ ಬಣ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ. ಇಂತಹ ಬೆಳವಣಿಗೆಗಳಿಂದ ವಿರೋಧ ಪಕ್ಷಗಳಿಗೆ ಲಾಭವಾಗುವ ಸಾಧ್ಯತೆ ಇದೆ. ಎಲ್ಲರೂ ಭಿನ್ನಾಭಿಪ್ರಾಯ ಬದಿಗಿಟ್ಟು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ಎರಡು ಗುಂಪುಗಳಿಗೂ ಎಚ್ಚರಿಕೆ ನೀಡಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಕುಮಾರ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಲಕ್ಷ್ಮಣ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್‌ಗೌಡ, ಮುಖಂಡರಾದ ಎಂ.ಟಿ.ಕೃಷ್ಣೇಗೌಡ, ರೇವಣ್ಣ, ಸೋಮಶೇಖರ್, ರಾಜೇಗೌಡ ಇತರರಿದ್ದರು.
ಸಭೆಯಲ್ಲಿ ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಮಹತ್ವ, ಮುಂದಿನ ಸಂಘಟನಾ ಚಟುವಟಿಕೆ ಹಾಗೂ ಪಕ್ಷವನ್ನು ಬೂತ್ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು. ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net