ಕಲಾಪದಿಂದ ದೂರ ಉಳಿದು ವಕೀಲರ ಪ್ರತಿಭಟನೆ

ನ್ಯಾಯಾಲಯದ ಕಲಾಪ ಬಹಿಷ್ಕರಿಸಿ
ನ್ಯಾಯಾಲಯದ ಕಲಾಪ ಬಹಿಷ್ಕರಿ
ಹೊಳೆನರಸೀಪುರದಲ್ಲಿ ತಾಲೂಕಿನ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ಶಿವಕುಮಾರ್, ಸುನಿಲ್, ದೇವರಾಜು, ರಾಜಶೇಖರ ಮತ್ತಿತರರಿದ್ದರು.
Published on: 

ಹೊಳೆನರಸೀಪುರ: ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಖಂಡಿಸಿ ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.

ಮಂಗಳವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ವಕೀಲರಾದ ಮಂಜುನಾಥ್ ಶ್ರೀರಾಮ್ ಹತ್ಯೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟರಮಣ ಸಣ್ಣಕ್ಕಿ ಅವರ ಕೊಲೆ ಯತ್ನ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ವಕೀಲರ ರಕ್ಷಣೆಗೆ ಸಂಬಂಧಿಸಿದಂತಿರುವ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಸಮಗ್ರ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕು. ನಿರ್ಭೀತಿಯಿಂದ ಹಾಗೂ ಸುರಕ್ಷಿತವಾಗಿ ಕರ್ತವ್ಯನಿರ್ವಹಿಸುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್, ವಕೀಲರಾದ ಸುನಿಲ್, ದೇವರಾಜು, ರಾಜಶೇಖರ ಮತ್ತಿತರರು ಹಾಜರಿದ್ದರು.