ಗ್ರಾಮದ ಏಕತೆ ಮತ್ತಷ್ಟು ಬಲಪಡಿಸಿ

ಶಾಸಕ ಎ. ಮಂಜು ಹೇಳಿಕೆ
ಹಳ್ಳಿಮೈಸೂರು ಹೋಬಳಿಯ ಮಾಚಗೌಡನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಶ್ರೀ ಕಾಡುಬಸವೇಶ್ವರ ದೇವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಕ್ತರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಹಳ್ಳಿಮೈಸೂರು ಹೋಬಳಿಯ ಮಾಚಗೌಡನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಶ್ರೀ ಕಾಡುಬಸವೇಶ್ವರ ದೇವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಕ್ತರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
Published on: 

ಅರಕಲಗೂಡು: ಹಳ್ಳಿಮೈಸೂರು ಹೋಬಳಿಯ ಮಾಚಗೌಡನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಶ್ರೀ ಕಾಡುಬಸವೇಶ್ವರ ದೇವರ ವಿಗ್ರಹ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಮಾಚಗೌಡನಹಳ್ಳಿ ಕೊಪ್ಪಲು, ಗೊರಗುಂಡಿ, ಹೊನ್ನಾಳಮ್ಮನ ಕೊಪ್ಪಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಗ್ರಹ ಪ್ರತಿಷ್ಠಾಪನಾ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.

ಶಾಸಕ ಎ. ಮಂಜು ಭಾಗವಹಿಸಿ ಶ್ರೀ ಕಾಡುಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ಆಧ್ಯಾತ್ಮಿಕ ಭಾವನೆ ಮೂಡಿಸುವುದರ ಜತೆಗೆ ಗ್ರಾಮಗಳ ನಡುವೆ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸುತ್ತವೆ. ಎಲ್ಲರೂ ಒಗ್ಗಟ್ಟಿನಿಂದ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಗ್ರಾಮದ ಏಕತೆ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ತಿಳಿಸಿದರು.

ಸುತ್ತಮುತ್ತಲಿನ ಗ್ರಾಮಸ್ಥರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.