ಜೀವ ಉಳಿಸಲು ರಕ್ತದಾನ ಸಹಕಾರಿ

ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿಕೆ
ರೋಟರಿ ಕ್ಲಬ್‌ನಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹಿಸಿದ್ದಕ್ಕಾಗಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜ್‌ಗೆ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಪ್ರಶಂಸ ಪತ್ರ ವಿತರಿಸಿದರು.  ಬಿ.ಬಿ.ಶಿವರಾಜು, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಶಿಗ್ಗಾವಿ, ಮಾಜಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ.ರಂಗನಾಥ್, ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಧನಂಜಯ್, ಉಪಾಧ್ಯಕ್ಷ ಸುಲೈಮಾನ್, ಸಿದ್ದೇಗೌಡ, ರೋಟರಿ ಕ್ಲಬ್ ಸದಸ್ಯರು ಸೇರಿದಂತೆ ಇತರರಿದ್ದರು.

Published on: 

ಬೇಲೂರು: ಸಮಾಜ ಸೇವೆ, ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಕ್ಲಬ್ ಮುಂಚೂಣಿಯಲ್ಲಿದೆ ಎಂದು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿದರು.

ರೋಟರಿ ಕ್ಲಬ್‌ನಿಂದ ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಆ.15ರಂದು ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹಿಸಿದ ಸಾಧನೆಗಾಗಿ ಚಾಮರಾಜೇಂದ್ರ ಆಸ್ಪತ್ರೆ ನೀಡಿದ ಪ್ರಶಂಸನಾ ಪತ್ರವನ್ನು ಶುಕ್ರವಾರದ ಗಾಂಧಿ ಜಯಂತಿ ಕಾರ್ಯಕ್ರಮದ ವೇಳೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜುಗೆ ಹಸ್ತಾಂತರಿಸಿ ಮಾತನಾಡಿದರು.

ರಕ್ತದಾನ ಮಾಡಿ ಜೀವ ಉಳಿಸುವ ಮಹತ್ಕಾರ್ಯದಲ್ಲಿ ತೊಡಗಿಸಿ ಕೊಂಡಿರುವ ರೋಟರಿ ಕ್ಲಬ್ ಹಾಗೂ ರೆಡ್ ಕ್ರಾಸ್ ಸಂಸ್ಥೆ ಸೇವೆ ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಯುವಜನತೆಗೆ ಹಾಗೂ ಸಾರ್ವಜನಿಕರಿಗೆ ಪ್ರೇರಣೆಯಾಗಬೇಕು. ರೋಟರಿ ಕ್ಲಬ್ ಇನ್ನಷ್ಟು ಸಮಾಜಸೇವಾ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಶುಭ ಹಾರೈಸಿದರು.

ರೋಟರಿ ಕ್ಲಬ್ ಅಧ್ಯಕ್ಷ ಬಿ.ಬಿ.ಶಿವರಾಜು ಮಾತನಾಡಿ, ರೋಟರಿ ಕ್ಲಬ್‌ನಿಂದ ಪ್ರತಿಯೊಂದು ಸಮಾಜಮುಖಿ ಕಾರ್ಯಕ್ರಮಕ್ಕೂ ತಹಸೀಲ್ದಾರ್ ಹಾಗೂ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಶ್ರೀಧರ್ ಕಂಕಣವಾಡಿ ಮತ್ತು ಸಭಾಪತಿ ವೈ.ಎಸ್.ಸಿದ್ದೇಗೌಡ ಸಹಕಾರ ನೀಡುತ್ತಿದ್ದಾರೆ. ರೋಟರಿ ಕ್ಲಬ್‌ನಿಂದ ಸ್ವಾತಂತ್ರೃ ದಿನಾಚರಣೆಯಂದು ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹವಾಗಿದ್ದನ್ನು ಗುರುತಿಸಿ ಚಾಮರಾಜೇಂದ್ರ ಆಸ್ಪತ್ರೆಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ನಮಗೆ ಹೆಚ್ಚಿನ ಪ್ರೇರಣೆ ನೀಡಿದೆ ಎಂದರು.

ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ ವೈ.ಎಸ್.ಸಿದ್ದೇಗೌಡ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯಿಂದ ರಕ್ತದಾನ ಶಿಬಿರ, ಆರೋಗ್ಯ ಅರಿವು ಸೇರಿದಂತೆ ಜನರ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಬಸವರಾಜ ಶಿಗ್ಗಾವಿ, ಮಾಜಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ.ರಂಗನಾಥ್, ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಧನಂಜಯ್, ಉಪಾಧ್ಯಕ್ಷ ಸುಲೈಮಾನ್, ಸಿದ್ದೇಗೌಡ, ರೋಟರಿ ಕ್ಲಬ್ ಸದಸ್ಯರು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net