ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಿ

ಶಾಸಕ ಎ.ಮಂಜು ಸೂಚನೆ
ಬಿದರೂರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು. ನಿಂಗಪ್ಪಣ್ಣ, ನಾಗರಾಜ, ನಾಗೇಶ್, ಸೋಮಣ್ಣ, ಕೃಷ್ಣ, ರವಿ, ಶ್ರೀನಿವಾಸ್, ಕಾಂತರಾಜ್ ಇತರರಿದ್ದರು.
ಬಿದರೂರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು. ನಿಂಗಪ್ಪಣ್ಣ, ನಾಗರಾಜ, ನಾಗೇಶ್, ಸೋಮಣ್ಣ, ಕೃಷ್ಣ, ರವಿ, ಶ್ರೀನಿವಾಸ್, ಕಾಂತರಾಜ್ ಇತರರಿದ್ದರು.
Published on: 

ಅರಕಲಗೂಡು: ತಾಲೂಕಿನ ಬಿದರೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ವಿವಿಧ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದು ಹೇಳಿದರು.

15 ಲಕ್ಷ ರೂ.ವೆಚ್ಚದಲ್ಲಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ಕಲಿಕಾ ವಾತಾವರಣ ಕಲ್ಪಿಸಲಾಗುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಿ, ನೂತನ ಕಟ್ಟಡವನ್ನು ಉದ್ಘಾಟನೆಗೆ ಸಿದ್ಧಪಡಿಸಬೇಕು. ಕಾಮಗಾರಿಯಲ್ಲಿ ಯಾವುದೇ ರೀತಿಯ ಗುಣಮಟ್ಟದ ಕೊರತೆ ಕಂಡುಬರದಂತೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಿದರು.

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕಾದರೆ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಶಾಲಾ ಕಟ್ಟಡ, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಖಂಡರಾದ ನಿಂಗಪ್ಪಣ್ಣ, ನಾಗರಾಜ, ನಾಗೇಶ್, ಸೋಮಣ್ಣ, ಕೃಷ್ಣ, ರವಿ, ಶ್ರೀನಿವಾಸ್, ಕಾಂತರಾಜ್, ರಾಜಣ್ಣ, ಪ್ರಭಾಕರ್, ಅಣ್ಣಯ್ಯ, ಮೋಹನ್, ಗೋಪಾಲ್, ಬಸವರಾಜು, ರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net