ಬೇಲೂರಲ್ಲಿ ಗಣೇಶೋತ್ಸವ ವೈಭವ

22 ದಿನಗಳ ಕಾಲ ಪೂಜೆ, ವಿವಿಧ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಕಾರ್ಯಕ್ರಮ
ಬೇಲೂರಿನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜಿಸಲು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿರುವುದು.
ಬೇಲೂರಿನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಸರ್ಜಿಸಲು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿರುವುದು.
Published on: 

ಬೇಲೂರು: ಪೇಟೆ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯಿಂದ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ವಿಸರ್ಜಿಸಲಾಯಿತು.

22 ದಿನಗಳ ಕಾಲ ಪೂಜೆ, ವಿವಿಧ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಕಾರ್ಯಕ್ರಮಗಳನ್ನು ನೆರವೇರಿಸಿದ ನಂತರ ಗಣೇಶ ಮೂತಿಯನ್ನು ಪುಷ್ಪಾಲಂಕೃತವಾದ ಮಂಟಪದಲ್ಲಿ ಕುಳ್ಳಿರಿಸಿ ವಿವಿಧ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ಸಮೀಪದ ಶ್ರೀ ವಿಷ್ಣು ಸಮುದ್ರ ಕೆರೆಯಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಸರ್ಜಿಸಲಾಯಿತು.

ಸಮಿತಿ ಅಧ್ಯಕ್ಷ ಪೈಂಟ್ ರವಿ, ಗೌರವಾಧ್ಯಕ್ಷ ಬಿಟುವಳ್ಳಿ ಉಮೇಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್, ಕಾರ್ಯಾಧ್ಯಕ್ಷ ಹೆಬ್ಬಾಳು ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಸನ್ನ, ಖಜಾಂಚಿ ಪರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net