ಮಕ್ಕಳ ಪ್ರತಿಭೆ ಗುರುತಿಸಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ

ಆಂದಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಈರೇಶ್ ಅಭಿಮತ
ಬೇಲೂರು: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಆಂದಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಈರೇಶ್ ಸಲಹೆ ನೀಡಿದರು.
ಬೇಲೂರು ತಾಲೂಕಿನ ಮಾದಿಹಳ್ಳಿ ಹೋಬಳಿಯ ಆಂದಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸುತ್ತಿರುವ ಗಣ್ಯರು. ಮುಖ್ಯ ಶಿಕ್ಷಕ ಈರೇಶ್, ಮಾದಿಹಳ್ಳಿ ಹೋಬಳಿ ಶಿಕ್ಷಣ ಸಂಯೋಜಕ ಶಿವಪ್ಪ ಮತ್ತಿತರರಿದ್ದರು.
Published on: 

ಬೇಲೂರು: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಆಂದಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಈರೇಶ್ ಸಲಹೆ ನೀಡಿದರು.

ತಾಲೂಕಿನ ಮಾದಿಹಳ್ಳಿ ಹೋಬಳಿಯ ಆಂದಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 2026-27ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಸೃಜನಶೀಲ ಕೌಶಲಗಳಿಗೆ ಇಂತಹ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೋಲು-ಗೆಲುವನ್ನು ಸಮಾನಾಗಿ ಸ್ವೀಕರಿಸಿದರೆ ಮಾತ್ರ ಆತ್ಮವಿಶ್ವಾಸ ಮೂಡುತ್ತದೆ. ಜತೆಗೆ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಆಸಕ್ತಿಗೆ ತಕ್ಕ ಸ್ಪರ್ಧೆಗಳನ್ನು ಆಯ್ಕೆ ಮಾಡಿಕೊಂಡು ಭಾಗವಹಿಸಿ ಸಾಧನೆಗೆ ಮುಂದಾಗಬೇಕು ಎಂದರು.

ಮಾದಿಹಳ್ಳಿ ಹೋಬಳಿ ಶಿಕ್ಷಣ ಸಂಯೋಜಕ ಶಿವಪ್ಪ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ವಿವಿಧ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ವದ ಕಾರ್ಯಕ್ರಮವಾಗಿದೆ. ಇಂತಹ ವೇದಿಕೆಗಳು ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕಲಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಹಿಂಜರಿಕೆಯಿಲ್ಲದೆ ಪಾಲ್ಗೊಳ್ಳಬೇಕು ಎಂದರು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಕಾಂತರಾಜು, ರಾಮಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಶೇಖರ್, ಮಾಜಿ ಅಧ್ಯಕ್ಷ ಹರ್ಷಕುಮಾರ್, ಪುಷ್ಪಲತಾ, ಸದಸ್ಯರಾದ ವಿಜಯ, ಆಶಾ, ರುದ್ರೇಶ್, ರೇಖಾ, ಪವಿತ್ರಾ, ಮೀನಾಕ್ಷಿ, ಶಿಕ್ಷಕರಾದ ಧರ್ಮಪ್ಪ, ಸೌಮ್ಯಾ, ಸವಿತಾ, ಆಶಾ ಹಾಗೂ ವಿದ್ಯಾರ್ಥಿಗಳು, ಪಾಲಕರಿದ್ದರು.