ಮಕ್ಕಳ ಮನೆ ಶಾಲೆಗೆ ಪ್ರೋತ್ಸಾಹ ಅಗತ್ಯ

ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಸತೀಶ್ ಅಭಿಪ್ರಾಯ
ಅರಕಲಗೂಡು ತಾಲೂಕಿನ ಮಧುರನಹಳ್ಳಿ ಮಕ್ಕಳ ಮನೆ ಶಾಲೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ಸತೀಶ್, ರವೀಂದ್ರ, ಪ್ರದೀಪ್ ಇತರರಿದ್ದರು.
ಅರಕಲಗೂಡು ತಾಲೂಕಿನ ಮಧುರನಹಳ್ಳಿ ಮಕ್ಕಳ ಮನೆ ಶಾಲೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ಸತೀಶ್, ರವೀಂದ್ರ, ಪ್ರದೀಪ್ ಇತರರಿದ್ದರು.
Published on: 

ಅರಕಲಗೂಡು: ಗ್ರಾಮೀಣ ಭಾಗದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಕ್ಕಳ ಮನೆ ಶಾಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಸತೀಶ್ ಹೇಳಿದರು.

ತಾಲೂಕಿನ ಮಧುರನಹಳ್ಳಿ ಮಕ್ಕಳ ಮನೆ ಶಾಲೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಇತ್ತೀಚೆಗೆ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಿಸಿ ಮಾತನಾಡಿದರು.

ರೈತ ಮತ್ತು ಗ್ರಾಮೀಣ ಮಕ್ಕಳಿಗೆ ಕಾನ್ವೆಂಟ್ ಮಾದರಿಯ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಹಿರಿಯ ವಿದ್ಯಾರ್ಥಿ ಬಳಗದ ಸಹಕಾರದಿಂದ ನಡೆಯುತ್ತಿರುವ ಮಕ್ಕಳ ಮನೆಯ ಪುಟಾಣಿಗಳಿಗೆ ಸಂಘದಿಂದ ಸ್ಲೇಟ್‌ಗಳು, ನೋಟ್‌ಬುಕ್‌ಗಳು, ಪೆನ್ಸಿಲ್, ರಬ್ಬರ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿಗಳು ಹಾಗೂ ಎರಡು ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಇನ್ನಷ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸಲು ಸಮಾಜದ ವಿವಿಧ ಸಂಘ-ಸಂಸ್ಥೆಗಳು ಹಾಗೂ ದಾನಿಗಳು ಕೈಜೋಡಿಸುವ ಅಗತ್ಯವಿದೆ ಎಂದರು.

ಸಂಘದ ಅಧ್ಯಕ್ಷರಾದ ಎಂ.ಎಸ್.ರವೀಂದ್ರ, ಎಲ್.ಎನ್.ಪ್ರದೀಪ್, ನಿರ್ದೇಶಕ ಎಂ.ಪಿ.ಮಹೇಶ್, ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net