

ಬೇಲೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕಿನ ಅರೇಹಳ್ಳಿ ರೋಟರಿ ಭವನದಲ್ಲಿ ಅರೇಹಳ್ಳಿ ಗೆಳೆಯರ ಬಳಗ ಹಾಗೂ ಶಟಲ್ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಇತ್ತೀಚೆಗೆ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಡಬಲ್ಸ್ ಮಾದರಿಯಲ್ಲಿ ಪಂದ್ಯಾವಳಿ ನಡೆದವು. ಕ್ರೀಡಾಸಕ್ತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸಿದ್ದಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.
ಸಮಾಜ ಸೇವಕ ಎಸ್.ವಿರೂಪಾಕ್ಷ ಅರೇಹಳ್ಳಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಕರು ಮೊಬೈಲ್ ಬಳಕೆಯಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಇದರಿಂದ ದೈಹಿಕ ಚಟುವಟಿಕೆಗಳು ಕಡಿಮೆಯಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಹೆಚ್ಚಿನ ಸಮಯವನ್ನು ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು. ಕ್ರೀಡೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತವೆ. ಯುವಕರಲ್ಲಿ ಸ್ನೇಹ, ಒಗ್ಗಟ್ಟು, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿ ಬೆಳೆಸುವಲ್ಲಿ ಇಂತಹ ಪಂದ್ಯಾವಳಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಉದ್ಯಮಿ ಸುನೀಲ್, ಮಹೇಶ್, ನಾಗೇಶ್, ಯೂಸಫ್, ಕೆ.ಜಿ.ರಾಯ್, ರಂಗಸ್ವಾಮಿ, ಶಾಂತೀಶ್, ವಿಶ್ವ, ಉಸ್ಮಾನ್, ಮಂಜು, ಪ್ರಕಾಶ್, ಲಿಥಿನ್, ಸೊಯಿಫ್, ಶಟಲ್ ಬ್ಯಾಡ್ಮಿಂಟನ್ ಕ್ಲಬ್‌ನ ಸದಸ್ಯರು, ಹಾಗೂ ಗೆಳೆಯರ ಬಳಗದ ಯುವಕರು ಇದ್ದರು.