ಹಟ್ಟಿಯಂಗಡಿ ಸಿದ್ಧಿವಿನಾಯಕ ಶಾಲೆಗೆ ಪ್ರಶಸ್ತಿ

award-1
Published on

ಕುಂದಾಪುರ: ಮೂಡುಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯಲ್ಲಿ ನಡೆದ ಎ.ಐ.ಸಿ.ಎಸ್ ಮಟ್ಟದ ಅಂತರ್‌ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

14 ವರ್ಷದ ಒಳಗಿನ ಬಾಲಕರ ವಿಭಾಗದ 600 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಸಿದ್ದಲಿಂಗ ಪಿ.ಓಲೇಕಾರ್ ದ್ವಿತೀಯ ಸ್ಥಾನ, 17 ವರ್ಷದೊಳಗಿನ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ತೇಜಸ್ ಲಕ್ಷ್ಮಣ ಸಂಭಾಜಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 400ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಈರಣ್ಣ ಕಾಳಪ್ಪ ಪತ್ತಾರ್ ತೃತೀಯ ಸ್ಥಾನ, 17 ವರ್ಷದೊಳಗಿನ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿಯ ಅನಿಕಾ ಎಚ್.ವೈ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಾಂಶುಪಾಲ ಶರಣಕುಮಾರ, ದೈಹಿಕ ಶಿಕ್ಷಕರು, ಶಿಕ್ಷಕರ ಸಹಿತ ಹಲವರು ವಿಜೇತರನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net