ವೈದ್ಯಾಧಿಕಾರಿಗಳ ನೇಮಕಕ್ಕೆ ನೇರ ಸಂದರ್ಶನ 20ರಿಂದ

Published on

ಹಾವೇರಿ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ 26 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಹ ಎಂ.ಬಿ.ಬಿ.ಎಸ್. ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಹಾಗೂ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಕ್ಕೆ ಜ.20ರಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ

ನೇರ ಸಂದರ್ಶನ ಜ.20ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಪ್ರತಿದಿನ ನಡೆಯಲಿದೆ. ಆಯ್ಕೆಯಾಗುವ ವೈದ್ಯರಿಗೆ ಮಾಸಿಕ 60 ಸಾವಿರ ರೂ. ವೇತನ ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ ಎಲ್ಲ ವರ್ಷದ ಅಂಕಪಟ್ಟಿಗಳು, ಹೌಸ್‌ಮನ್‌ಶಿಪ್ ಮುಗಿದ ಬಗ್ಗೆ ಪ್ರಮಾಣಪತ್ರ ಮತ್ತು ಕಾನೂನು ಬದ್ಧವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಮಾಣಪತ್ರ ಹಾಗೂ ಕೆಎಂಸಿ ನೋಂದಣಿ ಪ್ರಮಾಣಪತ್ರ, ಆಧಾರ್ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲಾತಿಗಳ ಝರಾಕ್ಸ್ ಪ್ರತಿಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಎಲ್ಲ ದಾಖಲೆಗಳನ್ನು ದ್ವಿ ಪ್ರತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಆಡಳಿತ ಭವನ ಹಾವೇರಿ-581110 ಈ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಪ್ರ.ದ.ಸ ಮಂಜು ಗಂಟಿಸಿದ್ದಪ್ಪನವರ (9538440933) ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net