ಗ್ರಾಮ ಒನ್ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯಲ್ಲಿ ಖಾಲಿ ಇರುವ ಮೂರು ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲೇ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯ ಸವಣೂರ ತಾಲೂಕು ಹಿರೇಮರಳಿಹಳ್ಳಿ, ಹಾನಗಲ್ಲ ತಾಲೂಕು ಹುಲ್ಲತ್ತಿ ಹಾಗೂ ಬ್ಯಾಡಗಿ ತಾಲೂಕು ಮತ್ತೂರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಸೆಂಟರ್ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಡಿ.15ರೊಳಗಾಗಿ https://www.karnatakaone.gov.in/Public/GramOneFranchiseeTermas ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net